
ನವದೆಹಲಿ (ಸೆ. 24): ಮುಂದಿನ 2 ವರ್ಷಗಳಲ್ಲಿ ದೇಶದಲ್ಲಿನ ಎಲ್ಲಾ ಬಸ್‌ಗಳನ್ನು ಎಲೆಕ್ಟ್ರಿಕ್ ಮಾದರಿಗೆ ಪರಿವರ್ತಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಎಲೆಕ್ಟ್ರಿಕ್ ವಾಹನಗಳ ಬಳಕೆ ಕಡ್ಡಾಯ ಮಾಡದ ಹೊರತಾಗಿಯೂ, ಮುಂದಿನ ೨ ವರ್ಷಗಳಲ್ಲಿ ಎಲ್ಲಾ ಬಸ್‌ಗಳನ್ನು ಎಲೆಕ್ಟ್ರಿಕ್ ಮಾದರಿಗೆ ಪರಿವರ್ತಿಸಲಾಗುವುದು. ಇಂಥ ಬಸ್‌ಗಳನ್ನು ಬಯೋ ಸಿಎನ್‌ಜಿ, ಎಥನಾಲ್, ಮೆಥನಾಲ್ ಮೂಲಕ ಓಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ಮೂಲಕ ಪರ್ಯಾಯ ಇಂಧನ ಆಧರಿತ ವಾಹನಗಳ ಬಳಕೆಗೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.