ರಾಜ್ಯದ್ಯಂತ ಖಾಸಗಿ ವೈದ್ಯರ ಮುಷ್ಕರ; ಚಿಕಿತ್ಸೆಗಾಗಿ ರೋಗಿಗಳ ಪರದಾಟ

Published : Nov 03, 2017, 10:28 AM ISTUpdated : Apr 11, 2018, 01:11 PM IST
ರಾಜ್ಯದ್ಯಂತ ಖಾಸಗಿ ವೈದ್ಯರ ಮುಷ್ಕರ; ಚಿಕಿತ್ಸೆಗಾಗಿ ರೋಗಿಗಳ ಪರದಾಟ

ಸಾರಾಂಶ

ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹೊರ ರೋಗಿಗಳ ಪ್ರವೇಶ ನಿರ್ಭಂಧಿಸಿ ಪ್ರತಿಭಟಿಸುತ್ತಿದ್ದಾರೆ.ಇದರಿಂದ ಎದುರಾಗುವ ತೊಂದರೆಗೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರು(ನ.03): ರಾಜ್ಯ ಸರ್ಕಾರ ತರಲು ಮುಂದಾಗಿರುವ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‍ಮೆಂಟ್ ಕಾಯ್ದೆ ತಿದ್ದುಪಡಿ ಖಂಡಿಸಿ ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರು ನಡೆಸುತ್ತಿದ್ದಾರೆ.

ಈ ಹಿಂದೆಯೂ ವೈದ್ಯರು ಒಂದು ದಿನದ ಮುಷ್ಕರ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಇದಕ್ಕೆ ಸರ್ಕಾರದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಕೇವಲ ಕಾರ್ಪೋರೇಟ್ ಆಸ್ಪತ್ರೆಗಳಿಗೆ ಸಹಕಾರಿಯಾಗುವ ಕಾನೂನಿನಿಂದ ಹಲವು ಖಾಸಗಿ ಆಸ್ಪತ್ರೆಗಳಿಗೆ  ಸಮಸ್ಯೆ ಆಗಲಿದೆ. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹೊರ ರೋಗಿಗಳ ಪ್ರವೇಶ ನಿರ್ಭಂಧಿಸಿ ಪ್ರತಿಭಟಿಸುತ್ತಿದ್ದಾರೆ.ಇದರಿಂದ ಎದುರಾಗುವ ತೊಂದರೆಗೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕಾಯ್ದೆ ಸಂಬಂಧ ಸರ್ಕಾರಕ್ಕೆ ಸಾಕಷ್ಟು ಸಾರಿ ಮನವಿ ಮಾಡಿದ್ದೆವು. ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ರಮೇಶ್ ಕುಮಾರ್‌'ಗೂ ನಮ್ಮ ಸಮಸ್ಯೆ ಬಗ್ಗೆ ವಿವರಿಸಿದ್ದೆವು. ಅವರಿಗೆ ಇದರ ಅರಿವಿದೆ. ಈ ಬಂ'ದ್‍ನಿಂದ ರೋಗಿಗಳಿಗೆ ಮಾತ್ರವಲ್ಲ, ಎಲ್ಲರಿಗೂ ತೊಂದರೆ ಆಗಲಿದೆ. ವೈದ್ಯರು, ಸಿಬ್ಬಂದಿ ಸಮಸ್ಯೆ ಎದುರಿಸಲಿದ್ದಾರೆ. ಇದರಿಂದ ಎಲ್ಲರಿಗೂ ತೊಂದರೆ. ಅದರೆ ಸರ್ಕಾರದ ಗಮನ ಸೆಳೆಯಲು ನಮಗೆ ಈ ಮುಷ್ಕರ ಅನಿವಾರ್ಯ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ಡಾ. ರವೀಂದ್ರ ತಿಳಿಸಿದ್ದಾರೆ.

ಮತ್ತೊಂದೆಡೆ ಖಾಸಗಿ ಆಸ್ಪತ್ರೆಗಳು ಬಂದ್‌'ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರು, ವೈದ್ಯೇತರ ಸಿಬ್ಬಂದಿ ರಜೆಯನ್ನು ಸರ್ಕಾರ ರದ್ದುಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಗುಲಗಳಿಗೆ ಸಬ್ಸಿಡಿ ದರದಲ್ಲಿ ಟಿಟಿಡಿ ಮೈಕ್‌, ವಿಗ್ರಹ
ಎಪ್ಸ್ಟೀನ್‌ ಸೆ* ಫೈಲ್‌ಗಳಲ್ಲಿ ಕ್ಲಿಂಟನ್‌, ಜಾಕ್ಸನ್‌ ಫೋಟೋ