ಕಾಶ್ಮೀರದಲ್ಲಿ ಎಲ್ಲ ಪೋಸ್ಟ್‌ ಪೇಯ್ಡ್‌ ಮೊಬೈಲ್‌ ಪುನಾರಂಭ?

Published : Oct 12, 2019, 01:42 PM IST
ಕಾಶ್ಮೀರದಲ್ಲಿ ಎಲ್ಲ ಪೋಸ್ಟ್‌ ಪೇಯ್ಡ್‌ ಮೊಬೈಲ್‌ ಪುನಾರಂಭ?

ಸಾರಾಂಶ

ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ರದ್ದು| ಎರಡು ತಿಂಗಳ ಬಳಿಕ ಪ್ರವಾಸಿಗರಿಗೆ ಸಿಕ್ತು ಕಣಿವೆ ನಾಡು ನೋಡುವ ಭಾಗ್ಯ| ಪ್ರವಾಸಿಗರಿಗೆ ಪ್ರವೇಶ ಸಿಕ್ಕ ಬೆನ್ನಲ್ಲೇ ಎಲ್ಲಾ ಪೋಸ್ಟ್‌ ಪೇಯ್ಡ್‌ ಮೊಬೈಲ್‌ ಪುನಾರಂಭ?

ಶ್ರೀನಗರ[ಅ.12]: ಜಮ್ಮು -ಕಾಶ್ಮೀರಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರದಿಂದ ಮತ್ತೊಂದು ಸಿಹಿಸುದ್ದಿ ಹೊರಬೀಳುವ ಸಾಧ್ಯತೆ ಇದೆ. ಪೋಸ್ಟ್‌ಪೇಯ್ಡ್‌ ಮೊಬೈಲ್‌ಗಳ ಮೇಲಿನ ನಿರ್ಬಂಧವನ್ನು ಸರ್ಕಾರ ಸಡಿಲಗೊಳಿಸಲಿದ್ದು, ಶನಿವಾರದಿಂದ ಪುನರಾರಂಭಗೊಳ್ಳುವ ಸಾಧ್ಯತೆ ಇದೆ.

ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷಾಧಿಕಾರ ರದ್ದಾದ ಬಳಿಕ ಎಲ್ಲ ಮಾದರಿಯ ಮೊಬೈಲ್‌ ಕರೆಗಳನ್ನು ನಿರ್ಬಂಧಿಸಲಾಗಿತ್ತು. ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಮೊದಲ ಹಂತದಲ್ಲಿ ಪೋಸ್ಟ್‌ಪೇಯ್ಡ್‌ ಮೊಬೈಲ್‌ಗಳಿಗೆ ನಿರ್ಬಂಧ ಸಡಿಸಲಾಗುತ್ತಿದೆ. ಆದರೆ, ಇಂಟರ್ನೆಟ್‌ ಸಂಪರ್ಕಕ್ಕೆ ಅನುಮತಿ ನೀಡಲಾಗಿಲ್ಲ.

ಮುಂದಿನ ದಿನಗಳಲ್ಲಿ ಪ್ರೀಪೇಯ್ಡ್‌ ಮೊಬೈಲ್‌ಗಳ ಮೇಲಿನ ನಿರ್ಬಂಧವನ್ನೂ ತೆರವುಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ್ರೋರಾತ್ರಿ ಪ್ರವಾಸಿಗರನ್ನು ಕಾಶ್ಮೀರದಿಂದ ಹೊರಹಾಕಿದ್ದರು!

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪ್ರವಾಸಿಗರಿಗೆ ಮತ್ತು ಅಮರನಾಥ ಯಾತ್ರಿಕರಿಗೆ ಉಗ್ರರಿಂದ ಅಪಾಯ ಇರುವ ಸುಳಿವು ನೀಡಿ ಕಳೆದ ಆಗಸ್ಟ್‌ 2ರಂದು ಅಮರನಾಥ ಯಾತ್ರಿಕರು ಮತ್ತು ಪ್ರವಾಸಿಗರು ಕಾಶ್ಮೀರವನ್ನು ಕೂಡಲೇ ತೊರೆದು ವಾಪಸಾಗಬೇಕೆಂದು ಅಲ್ಲಿನ ರಾಜ್ಯ ಸರ್ಕಾರ ದಿಢೀರ್‌ ಸೂಚನೆ ನೀಡಿತ್ತು. ನಂತರ ಕಣಿವೆ ರಾಜ್ಯದಲ್ಲಿದ್ದ ಪ್ರವಾಸಿಗರನ್ನು ಮೂರು ದಿನದಲ್ಲಿ ಸಂಪೂರ್ಣವಾಗಿ ಹೊರ ಕಳಿಸಲಾಗಿತ್ತು.

ಅದಕ್ಕೂ ಮುನ್ನ ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ಹೆಚ್ಚುವರಿ ಸೇನೆಯನ್ನು ಜಮಾವಣೆ ಮಾಡಿದಾಗಲೇ 20000 ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಹಾಗೂ 2 ಲಕ್ಷ ಕಾರ್ಮಿಕರು ರಾಜ್ಯ ತೊರೆದಿದ್ದರು.

ನಂತರ ಆಗಸ್ಟ್‌ 5ರಂದು ಕೇಂದ್ರ ಸರ್ಕಾರ ಕಣಿವೆ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಜಮ್ಮು-ಕಾಶ್ಮೀರವನ್ನು ಮೂರು ಭಾಗ ಮಾಡಿತು. ಜೊತೆಗೆ ಹೊರಗಿನ ಯಾರೂ ರಾಜ್ಯ ಪ್ರವೇಶಿಸದಂತೆ ನಿಷೇಧ ಹೇರಿತು. ವಿಶೇಷ ಸ್ಥಾನಮಾನ ಹಿಂಪಡೆತದಿಂದ ಅಲ್ಲಿ ಹಿಂಸಾಚಾರ ಉಂಟಾಗಬಹುದು, ಗಲಭೆ ಎದ್ದು ಉದ್ವಿಗ್ನ ಪರಿಸ್ಥಿತಿ ತಲೆದೋರಬಹುದೆಂದು ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿತ್ತು.

ಕಣಿವೆಯಲ್ಲಿ ನಡೆಯುತ್ತಿರುವುದು ಧರ್ಮಯುದ್ಧ: ಇಮ್ರಾನ್ ಇವಾಗ ತೆಪ್ಪಗಿದ್ದರೆ ಚೆಂದ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್