ಬಿಜೆಪಿ ಗೆಲ್ಲಿಸಿದ್ದು ಕೇಂದ್ರದಲ್ಲಿ ಅಧಿಕಾರ ನಡೆಸಲೇ ಹೊರತು ಸರ್ಕಾರ ಬೀಳಿಸಲು ಅಲ್ಲ

By Web DeskFirst Published May 27, 2019, 4:37 PM IST
Highlights

ಕೇಂದ್ರದಲ್ಲಿ ಅಧಿಕಾರ ನಡೆಸಲು ರಾಜ್ಯದಲ್ಲಿ ಬಿಜೆಪಿ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದೆ. ರಾಜ್ಯದಲ್ಲಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇದಕ್ಕೆ ಕಾರಣ ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು  ರಾಜ್ಯದಲ್ಲಿ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿ ಎಂದಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಸರಣಿ ಟ್ವೀಟ್ ಮಾಡಿದ್ದಾರೆ. 

ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆ ವಿಸರ್ಜನೆ ಮಾಡಲಿ ಎನ್ನುವುದು ಸರಿಯಲ್ಲ ಎಂದಿದ್ದಾರೆ. 

 

ಜೂನ್ 1ರ ಒಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಸೂಕ್ತ.

— Siddaramaiah (@siddaramaiah)

ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವಿಚಾರವಾಗಿಯೂ  ಟ್ವೀಟ್ ಮಾಡಿದ್ದು, ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ.  ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಎಂದು ಹೇಳುತ್ತಲೇ ಇದ್ದಾರೆ.  ಇನ್ನೂ ನಾಲ್ಕು ವರ್ಷ ಹೀಗೆ ಹೇಳುತ್ತಾರೆ. ಸರ್ಕಾರ ಸುಭದ್ರವಾಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. 

 

ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ. ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ, ಇನ್ನೂ 4 ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂಬ ಭರವಸೆಯಿದೆ.

— Siddaramaiah (@siddaramaiah)

ಜೂನ್ ಒಂದರ ಒಳಗೆ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂಪ್ಪ ಹೇಳಿದ್ದು, ಅದು ಸಾಧ್ಯವಾಗದಿದ್ದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಎಂದು ಸವಾಲು ಹಾಕಿದರು. 

 

ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ.
ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್.

— Siddaramaiah (@siddaramaiah)
click me!