
ರಾಮನಗರ: ಒಂದೊಮ್ಮೆ ರಾಮನಗರ ಉಪಚುನಾವಣೆಗೆ ಜೆಡಿಎಸ್‌ನಿಂದ ನಟ ಅಂಬರೀಶ್ ಕಣಕ್ಕಿಳಿದರೆ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಈ ವಿಷಯದಲ್ಲಿ ನಮ್ಮ ಪಕ್ಷದ ವರಿಷ್ಠರು ಅನುಮತಿ ನೀಡದಿದ್ದರೂ ನಾಮಪತ್ರ ಸಲ್ಲಿಸಲು ಸಿದ್ಧ ಎಂದು ವಿಧಾನಪರಿಷತ್ ಸದಸ್ಯ .ಎಂ. ಲಿಂಗಪ್ಪ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಭಾಗಿದಾರರಲ್ಲ. ಈಗಿರುವ ಹೊಂದಾಣಿಕೆ ವ್ಯವಸ್ಥೆ ನಮ್ಮ ಆತ್ಮಕ್ಕೆ ಒಪ್ಪಿಗೆ ಆಗುತ್ತಿಲ್ಲ. ರಾಮನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಇರುವುದಿಲ್ಲ.
ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರನ್ನು ಉಪ ಚುನಾವಣೆಯಲ್ಲಿ ಕಣಕ್ಕಿಳಿಸಲಾಗುವುದು. ಕಾಂಗ್ರೆಸ್ ಅಭ್ಯರ್ಥಿಯಾಗಲು ಮೊದಲ ಆಯ್ಕೆ ಮತ್ತು ಅವಕಾಶ ಅವರಿಗೆ ಮೀಸಲು. ಅವರು ಒಪ್ಪದಿದ್ದರೆ ಪಕ್ಷದಲ್ಲಿ ಚರ್ಚಿಸಿ ಬೇರೊಬ್ಬರಿಗೆ ಅವಕಾಶ ನೀಡಲಾಗುವುದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.