ನವದೆಹಲಿ: ಕರ್ನಾಟಕ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suvarna News   | Asianet News
Published : Apr 14, 2021, 11:45 AM IST
ನವದೆಹಲಿ: ಕರ್ನಾಟಕ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಾರಾಂಶ

ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ‌ ಸಲ್ಲಿಸಿ, ಪುಷ್ಪಾರ್ಚನೆ‌ ಮಾಡಿದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರೂ ಆದ ಡಾ.ಸಂದೀಪ್ ದವೆ| ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ 130ನೇ ಜನ್ಮ‌ದಿನಾಚರಣೆ| 

ನವದೆಹಲಿ(ಏ.14):  ಇಲ್ಲಿನ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ-1ರ 'ಕಾವೇರಿ'ಯಲ್ಲಿ ಇಂದು(ಬುಧವಾರ) ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ‌ದಿನಾಚರಣೆ ಆಚರಿಸಲಾಗಿದೆ.

ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರೂ ಆದ ಡಾ.ಸಂದೀಪ್ ದವೆ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ‌ ಸಲ್ಲಿಸಿ, ಪುಷ್ಪಾರ್ಚನೆ‌ ಮಾಡಿದ್ದಾರೆ.

ಮಮತಾಗೂ, ಮೋದಿಗೂ ವ್ಯತ್ಯಾಸವೇ ಇಲ್ಲ: ಓವೈಸಿ

ಈ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತರಾದ ವಿಜಯ ರಂಜನ್ ಸಿಂಗ್, ಅಪರ ನಿವಾಸಿ ಆಯುಕ್ತರಾದ ಗುರ್ನೀತ್ ತೇಜ್, ಉಪ ನಿವಾಸಿ ಆಯುಕ್ತರಾದ ಎಚ್.ಪ್ರಸನ್ನ ಹಾಗೂ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಬಾಂಗ್ಲಾ ರಾಜತಾಂತ್ರಿಕ ಸಮರ
ಜಿ ರಾಮ್‌ ಜಿಗೆ ರಾಜ್ಯ ಶೇ.40ರಷ್ಟು ಪಾಲು ನೀಡಲಾಗದು : ಡಿಕೆಶಿ