ಜನಾರ್ದನ ರೆಡ್ಡಿಗೆ ಇನ್ನೂ ಒಂದು ದಿನ ಜೈಲೇ ಗತಿ..!

Published : Nov 13, 2018, 03:01 PM ISTUpdated : Nov 13, 2018, 03:07 PM IST
ಜನಾರ್ದನ ರೆಡ್ಡಿಗೆ ಇನ್ನೂ ಒಂದು ದಿನ ಜೈಲೇ ಗತಿ..!

ಸಾರಾಂಶ

ಅಂಬಿಡೆಂಟ್ ಕಂಪನಿ ಕೋಟಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಜನಾರ್ದನ ರೆಡ್ಡಿ ಇನ್ನೂ ಒಂದು ದಿನ ಜೈಲುವಾಸ ಅನುಭವಿಸಲೇಬೇಕಾಗಿದೆ.

ಬೆಂಗಳೂರು, [ನ.13]: ಅಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಿಚಿವ ಜನಾರ್ದನ ರೆಡ್ಡಿ ಜಾಮೀನು ತೀರ್ಪು ನಾಳೆಗೆ [ಬುಧವಾರ] ಮುಂದೂಡಿದೆ.

ನವೆಂಬರ್ 12ರಂದು ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನದಿಂದಾಗಿ ಕೋರ್ಟ್ ರಜೆ ಇತ್ತು.

ಆಂಬಿಡೆಂಟ್ & ರೆಡ್ಡಿ: ಸುವರ್ಣನ್ಯೂಸ್‌ನಿಂದ Super Exclusive ವರದಿಗಳ ಸರಮಾಲೆ

 ಹಾಗಾಗಿ ಇಂದು [ಮಂಗಳವಾರ] ಜನಾರ್ದನ ರೆಡ್ಡಿ ಪರ ವಕೀಲ  C.H.ಹನುಮಂತರಾಯ 1ನೇ ACMM ನ್ಯಾಯಾಲಯಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. 

ಆದರೆ, ನ್ಯಾಯಧೀಶ ಜಗದೀಶ್ ಅವರು ಜಾಮೀನು ತೀರ್ಪು ಅನ್ನ ನಾಳೆ ಅಂದರೆ ಬುಧವಾರಕ್ಕೆ ಮುಂದೂಡಿದ್ದಾರೆ. ಹೀಗಾಗಿ ಇಂದು ರಾತ್ರಿ ಕೂಡ ರೆಡ್ಡಿ ಜೈಲಿನಲ್ಲಿಯೇ ಕಳೆಯಬೇಕಿದೆ.

ಮತ್ತೊಂದೆಡೆ ರೆಡ್ಡಿಗೆ ಜಾಮೀನು ನೀಡದಂತೆ ಆಕ್ಷೇಪಣೆ ಪಡೆಸಿದ್ದು,  ಪ್ರಕರಣ ತನಿಖಾ ಹಂತದಲ್ಲಿದೆ ಒಂದು ವೇಳೆ ಬೇಲ್ ಕೊಟ್ಟರೆ ಆರೋಪಿ ಎಸ್ಕೇಪ್ ಆಗುತ್ತಾರೆ. 

ಹೀಗಾಗಿ ಯಾವುದೇ ಕಾರಣಕ್ಕೂ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಲು​ಸಿಸಿಬಿ ನಿರ್ಧರಿಸಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!