
ಬೆಂಗಳೂರು[ನ.25]: ಕಲಿಯುಗದ ಕರ್ಣ ಖ್ಯಾತಿಯ ಅಂಬರೀಷ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಸುಮಲತಾ ಅಂಬರೀಷ್ ನೆನಪಿಸಿಕೊಂಡ ಲವ್ ಸ್ಟೋರಿ
ಶನಿವಾರ ತಡರಾತ್ರಿ ಅಂಬಿ ವಿಕ್ರಮ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇದೀಗ ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಿಂದ ಚಾಮರಾಜನಗರದಲ್ಲಿರುವ ಕಲಾವಿದರ ಸಂಘದಲ್ಲಿ ಕೆಲಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಆ ಬಳಿಕ ಕಂಠೀರವ ಸ್ಟೇಡಿಯಂಗೆ ಕೊಂಡ್ಯೊಯಲಾಗುತ್ತದೆ. ಕಂಠೀರವ ಸ್ಟುಡಿಯೋಗೆ ಹೋಗುವವರು ತಮ್ಮ ವಾಹನಗಳನ್ನು ಫ್ರೀಡಂ ಪಾರ್ಕ್’ನಲ್ಲೇ ಪಾರ್ಕ್ ಮಾಡಲು ಪೊಲೀಸರು ಸೂಚಿಸಿದ್ದಾರೆ.
ಅಂಬಿ ನಿಧನದ ಸುದ್ದಿ ಕೇಳಿ ಅವರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ರಾಜ್ಯದ ನಾನಾ ಮೂಲೆಗಳಿಂದ ಜನರು ನಗರಕ್ಕೆ ಆಗಮಿಸುತ್ತಿದ್ದಾರೆ. ಸಾಕಷ್ಟು ಅಭಿಮಾನಿಗಳು ಗೊಂದಲಕ್ಕೊಳಗಾಗಿ ಕಂಠೀರವ ಸ್ಟೇಡಿಯಂಗೆ ಹೋಗುವ ಬದಲು ಕಂಠೀರವ ಸ್ಟುಡಿಯೋಕ್ಕೆ ಹೋಗುತ್ತಿದ್ದಾರೆ. ಆದರೆ ನೆನಪಿರಲಿ ಅಂಬಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ಕಂಠೀರವ ಸ್ಟೇಡಿಯಂನಲ್ಲೇ ಹೊರತು, ಕಂಠೀರವ ಸ್ಟುಡಿಯೋದಲ್ಲಲ್ಲ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.