
ಬೆಂಗಳೂರು(ಮೇ.28): ಅನಾರೋಗ್ಯದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪದಲ್ಲಿ ಸರಿಯಾಗಿ ಹಾಜರಾಗಲು ಆಗಲಿಲ್ಲ ಎಂದು ಶಾಸಕ ಅಂಬರೀಷ್ ಸ್ಪಷ್ಟನೆ ನೀಡಿದ್ದಾರೆ. ಸದನದಲ್ಲಿನ ಹವಾನಿಯಂತ್ರಿತ ವ್ಯವಸ್ಥೆ ನನ್ನ ಆರೋಗಕ್ಕೆ ಸರಿಹೊಂದುತ್ತಿರಲಿಲ್ಲ. ಆದ್ದರಿಂದ ಅನಾರೋಗ್ಯಕ್ಕೀಡಾಗಿ ಹಿಂದಿನ ಅಧಿವೇಶನಗಳಿಗೆ ಹಾಜರಾಗಲಿಲ್ಲ. ಇತ್ತೀಚಿಗೆ ಚಿಕಿತ್ಸೆ ಪಡೆದು ಬಂದಿದ್ದೇನೆ. ಜೂನ್ 5ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ತಪ್ಪದೆ ಭಾಗವಹಿಸುತ್ತೇನೆ ಎಂದು ಅವರು ಸ್ಪೀಕರ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಜೂನ್ 5ರಿಂದ 10 ದಿನ ಅಧಿವೇಶನ
ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಜೂನ್ 5ರಿಂದ 16ರವರೆಗೆ 10 ದಿನಗಳ ಕಾಲ ನಡೆಯಲಿದ್ದು, ಈ ಕುರಿತು ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಜೂನ್ 5ರಿಂದ 9ರವರೆಗೆ ಹಾಗೂ ಜೂನ್ 12ರಿಂದ 16ರವರೆಗೆ ಒಟ್ಟು 10 ದಿನಗಳ ಕಾಲ ಸರ್ಕಾರಿ ಹಾಗೂ ಖಾಸಗಿ ಕಾರ್ಯಕಲಾಪಗಳು ನಡೆಯಲಿದ್ದು, ಜೂನ್ 10 ಎರಡನೇ ಶನಿವಾರ ಹಾಗೂ ಜೂನ್ 11ರಂದು ಭಾನುವಾರ ಸರ್ಕಾರಿ ರಜೆ ನಿಮಿತ್ತ ಕಲಾಪ ನಡೆಯುವುದಿಲ್ಲ ಎಂದು ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.