ಸರ್ಕಾರ ಪತನದ ಭೀತಿಯಲ್ಲಿರುವ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ!

By Web DeskFirst Published Jul 21, 2019, 8:16 AM IST
Highlights

ಸಿಎಂ ಕುಮಾರಸ್ವಾಮಿಗೆ ಸಂಕಷ್ಟ| ಹಲಗೆವಡೇರಹಳ್ಳಿ ಕೇಸಿನ ಬಿ ರಿಪೋರ್ಟ್‌ ರದ್ದು| ಮರುತನಿಖೆಗೆ ಜನಪ್ರತಿನಿಧಿ ಕೋರ್ಟ್‌ ಆದೇಶ

ಬೆಂಗಳೂರು[ಜು.21]: ರಾಜಧಾನಿಯ ಹಲಗೆವಡೇರಹಳ್ಳಿಯಲ್ಲಿ ನಿಯಮಬಾಹಿರವಾಗಿ ಜಮೀನು ಡಿ-ನೋಟಿಫಿಕೇಷನ್‌ ಮಾಡಿದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕ್ಲೀನ್‌ಚಿಟ್‌ ನೀಡಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ವಜಾಗೊಳಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ, ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ ಪ್ರಕರಣದ ಮರು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.

ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ಮೇಲೆ ಪ್ರಭಾವ ಬೀರಿ ಬಿ ರಿಪೋರ್ಟ್‌ ಹಾಕುವಂತೆ ನೋಡಿಕೊಂಡಿದ್ದು, ಅಧಿಕಾರ ದುರುಪಯೋಗಪಡಿಸಿದ್ದಾರೆ. ಹೀಗಾಗಿ ಬಿ ರಿಪೋರ್ಟ್‌ ಅನ್ನು ನ್ಯಾಯಾಲಯ ಒಪ್ಪಬಾರದು. ಕುಮಾರಸ್ವಾಮಿ ಅವರ ಮೇಲಿನ ಪ್ರಾಸಿಕ್ಯೂಷನ್‌ ಅನ್ನು ಮುಂದುವರೆಸಬೇಕು ಎಂದು ಚಾಮರಾಜನಗರ ಮೂಲದ ಮಹದೇವಸ್ವಾಮಿ ಎಂಬುವರು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲರ ವಾದ ಅಲಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದ್ದಾರೆ.

ಜ್ಯೋತಿಷಿಗಳ ಭವಿಷ್ಯ, ಮಗನ ಸರ್ಕಾರ ಉಳಿಸಲು ಗೌಡರ ರಣತಂತ್ರ!

2006-07ರ ನಡುವೆ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಡಿಎ ಬಡಾವಣೆಗಾಗಿ ವಶಪಡಿಸಿಕೊಂಡಿದ್ದ ಬೆಂಗಳೂರಿನ ಹಲಗೆವಡೇರಹಳ್ಳಿಯಲ್ಲಿರುವ 3 ಎಕರೆ 35 ಗುಂಟೆ ಜಮೀನನ್ನು ನಿಯಮಬಾಹಿರವಾಗಿ ಡಿ ನೋಟಿಫಿಕೇಷನ್‌ ಮಾಡಿದ್ದರು.

ಈ ಬಗ್ಗೆ ಚಾಮರಾಜನಗರ ಜಿಲ್ಲೆಯ ಮಹದೇವಸ್ವಾಮಿ ಅವರು 2012ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು 2018ರಲ್ಲಿ ಪ್ರಕರಣದ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್‌ಗೆ ಆಕ್ಷೇಪಣೆ ವ್ಯಕ್ತಪಡಿಸಿ ಮಹದೇವಸ್ವಾಮಿ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿ ರಿಪೋರ್ಟ್‌ ವಜಾಗೊಳಿಸಿ ಇದೀಗ ಮರು ತನಿಖೆಗೆ ಆದೇಶಿಸಿದೆ.

click me!