
ಬೆಂಗಳೂರು [ಜು.14] : ರಾಜ್ಯ ರಾಜಕೀಯ ಪ್ರಹಸನದ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ.
ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ HAL ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ದಿಲ್ಲಿಗೆ ತೆರಳುವ ಸಾಧ್ಯತೆ ಇದೆ. ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಸುಪ್ರೀಂ ತೀರ್ಪು ಬೆನ್ನಲ್ಲೇ ಸಿಎಂ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ದಿಲ್ಲಿಗೆ ತೆರಳಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭೇಟಿ ಮಾಡುವ ಸಾಧ್ಯತೆ ಇದೆ. ಆದರೆ ಸಿಎಂ ಪ್ರಯಾಣದ ಹಾದಿ ಮಾತ್ರ ಇನ್ನೂ ನಿಗೂಢವಾಗಿಯೇ ಇದೆ.
ಅವಿಶ್ವಾಸ ನಿರ್ಣಯದ ವೇಳೆ ಅತೃಪ್ತರಾಗಿ ರಾಜೀನಾಮೆ ನೀಡಿ ಹೋದ ಶಾಸಕರು ಆಗಮಿಸಬಹುದು ಅಥವಾ, ಆಗಮಿಸದೇ ಇರಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಅವರಿಗೆ ಆಗಮಿಸಲು ಯಾವುದೇ ಒತ್ತಡ ಹೇರುವಂತಿಲ್ಲ ಎಂದು ತೀರ್ಪು ಬಂದಿದೆ. ಇದು ಮೈತ್ರಿ ನಾಯಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.