
ಬೆಂಗಳೂರು (ಸೆ.20): 2018 ರ ಕರ್ನಾಟಕ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಉಭಯ ಪಕ್ಷಗಳು ತಂತ್ರ-ರಣತಂತ್ರಗಳನ್ನು ಹೆಣೆಯುವಲ್ಲಿ ಬ್ಯಸಿಯಾಗಿವೆ. 2018 ರ ಚುನಾವಣೆಯನ್ನು ಟಾರ್ಗೆಟ್ ಮಾಡಿರುವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ಹೊಸ ಸೂಚನೆ ನೀಡಿದ್ದಾರೆ.
ದೆಹಲಿಯಲ್ಲೇ ಕುಳಿತು ಕರ್ನಾಟಕ ರಾಜ್ಯ ರಾಜಕಾರಣ ಗುಣಾಕಾರ, ಭಾಗಾಕಾರ ಲೆಕ್ಕ ಹಾಕುತ್ತಿದ್ದಾರೆ ಅಮಿತ್ ಶಾ. ರಾಜ್ಯ ಬಿಜೆಪಿ ನಾಯಕರನ್ನು ಬಡಿದೆಬ್ಬಿಸುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ 100 ಆರೋಪಗಳ ಪಟ್ಟಿ ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ. ಸರ್ಕಾರದ ವಿರುದ್ಧ ಜನಾಂದೋಲನ ಸೃಷ್ಟಿಯಾಗಬೇಕು ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖಡಕ್ ಸೂಚನೆ ನೀಡಿದ್ದಾರೆ. ಫೆಬ್ರವರಿಯೊಳಗೆ ಸರ್ಕಾರದ ವಿರುದ್ಧದ ಎಲ್ಲಾ ಹೋರಾಟಗಳು ಪೂರ್ಣಗೊಳ್ಳಬೇಕು ಎಂದು ಗಡುವನ್ನೂ ಅಮಿತ್ ಶಾ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.