
ಬೆಂಗಳೂರು (ನ.02): ಇಂದಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ‘ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ’ ಆರಂಭವಾಗಿದೆ. ರಾಜ್ಯ ರಾಜಕಾರಣದ ಮಟ್ಟಿಗೆ ಇದೊಂದು ಐತಿಹಾಸಿಕ ಯಾತ್ರೆಯಾಗಲಿದ್ದು, ದಾಖಲೆ ಮೆರೆಯಲಿದೆ. ಸುಮಾರು 75 ದಿನಗಳ ಕಾಲ ಯಡಿಯೂರಪ್ಪ ಅವರೊಂದಿಗೆ ಹಲವು ಮುಖಂಡರು ಅಂದಾಜು 7,500 ಕಿ.ಮೀ.ಗಳನ್ನು ಕ್ರಮಿಸುವ ಗುರಿ ಹೊಂದಲಾಗಿದೆ. ಈ ರ್ಯಾಲಿಗೆ ಚಾಲನೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ಖಾಸಗಿ ಸಂಸ್ಥೆಯೊಂದು ದೇಶಾದ್ಯಂತ ಸಮೀಕ್ಷೆ ಮಾಡಿದೆ. ಸಮೀಕ್ಷೆ ಪ್ರಕಾರ ಭ್ರಷ್ಟ ಸರ್ಕಾರವೆಂದರೆ ಅದು ಕಾಂಗ್ರೆಸ್ ಸರ್ಕಾರ. ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುವ ಮೂಲಕ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರಕ್ಕೆ ಯತ್ನಿಸಿದೆ. ಕರ್ನಾಟಕ ರಾಜ್ಯವು ಹಿಂದುಳಿದ ರಾಜ್ಯವೇ ಅಲ್ಲ. ಕೇಂದ್ರ ಸರ್ಕಾರ ಎಷ್ಟೇ ಅನುದಾನ ನೀಡಿದರೂ ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿಲ್ಲ. ಎರಡೂವರೆ ಲಕ್ಷ ಕೋಟಿಗೂ ಹೆಚ್ಚು ಅನುದಾನ ಕೊಟ್ಟಿದ್ದೇವೆ. ಕೇಂದ್ರದ ಅನುದಾನ ಎಲ್ಲಿ ಹೋಯ್ತು ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ನೀಡಿದ ಅನುದಾನ ಎಲ್ಲಿ ಹೋಯಿತು? ಸಿದ್ದರಾಮಯ್ಯ ಸರ್ಕಾರವನ್ನು ನಾನು ಕೇಳುತ್ತೇನೆ, ಉತ್ತರ ಕೊಡಿ ಎಂದು ಚುನಾವಣಾ ಹೊಸ್ತಿಲಲ್ಲಿ ಅನುದಾನ ಪ್ರಶ್ನೆ ಎತ್ತಿದ್ದಾರೆ.
ಇದೇ ವೇಳೇ ಹಿಂದೂ ಕಾರ್ಯಕರ್ತರ ಹತ್ಯೆ ವಿಚಾರ ಪ್ರಸ್ತಾಪಿಸಿದ ಅಮಿತ್ ಶಾ, SDPI, PFI ಕಾರ್ಯಕರ್ತರ ಕೇಸ್ ಅನ್ನು ವಾಪಸ್ ಪಡೆದಿದ್ದಾರೆ. ದೇಶ ವಿರೋಧಿ ಕೃತ್ಯ ನೀಡಿದವರಿಗೆ ಸಿದ್ದರಾಮಯ್ಯ ಬೆಂಬಲ ನೀಡುತ್ತಿದ್ದಾರೆ. ಸಿದ್ದರಾಮಯ್ಯ ತಮಗೆ ತಾವೇ ಅಹಿಂದ ನಾಯಕ ಎಂದುಕೊಳ್ಳುತ್ತಾರೆ ಎಂದು ಆರೋಪಿಸಿದ್ದಾರೆ. ಎಲ್ಲರೂ ಮೋದಿಯವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ ನಮ್ಮ ಗುರಿ 150 ದಾಟುವುದು ನಮ್ಮ ಗುರಿ. ‘ತಂತ್ರಗಳನ್ನು ಹೇಳೋದಲ್ಲ, ಮಾಡಿ ತೋರಿಸ್ತೀವಿ ಎಂದು ಬಿಎಸ್'ವೈ ಹೇಳಿದ್ದಾರೆ.
ಮಹದಾಯಿ ಸಮಸ್ಯೆ ಪರಿಹಾರಕ್ಕೆ ಇಂದೇ ಅಮಿತ್ ಶಾ ಜತೆ ಚರ್ಚೆ ಮಾಡುತ್ತೇವೆ. ಮುಂದಿನ ದಿನದಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.