ಬೈ ಎಲೆಕ್ಷನ್‌: ಅನರ್ಹ ಶಾಸಕರಿಗೆ ಮಣೆ, ಟಿಕೆಟ್ ಆಕಾಂಕ್ಷಿಗಳಿಗೆ ಬೇರೆ ಆಫರ್ ಕೊಟ್ಟ BSY

By Web Desk  |  First Published Sep 30, 2019, 3:41 PM IST

ಕರ್ನಾಟಕದ 17 ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿದ್ದು, ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಪಕ್ಷದಲ್ಲಿ ಹಗ್ಗಾಜಗ್ಗಾಟ ನಡೆಯುತ್ತಿದೆ.  ಇದರ ಮಧ್ಯೆ ಸತ್ವಃ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದು ಹೀಗೆ.


ಶಿವಮೊಗ್ಗ, (ಸೆ.30): ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿರುವ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡುವ ಬಗ್ಗೆ ಪಕ್ಷದಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ.

ಕೆಲವರು ಅನರ್ಹರಿಗೆ ಬೈ ಎಲೆಕ್ಷನ್ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ರೆ, ಮತ್ತೊಂದೆಡೆ ಅನರ್ಹ ಶಾಸಕರು ನಮಗೆ ಅತಿಥಿಗಳಿದ್ದಂತೆ. ಹೀಗಾಗಿ ಅವರಿಗೆ ಟಿಕೆಟ್ ನೀಡಬೇಕೆಂದು ಕೆಲವರ ಅಭಿಪ್ರಾಯ. ಇದರಿಂದ ಬಿಜೆಪಿಯಲ್ಲಿ ಬೈ ಎಲೆಕ್ಷನ್ ಟಿಕೆಟ್ ಹಗ್ಗಾಜಗ್ಗಾಟ ಮುಂದುವರಿದಿದೆ. ಇದರ ಮಧ್ಯೆ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. 

Tap to resize

Latest Videos

undefined

ಬೈ ಎಲೆಕ್ಷನ್‌ಗೆ ಹೊಸ ಡೇಟ್ ಫಿಕ್ಸ್: ಅನರ್ಹ ಶಾಸಕರಿಗೆ ಮತ್ತೆ ಟೆನ್ಷನ್ ಶುರು

ಶಿವಮೊಗ್ಗದ ಶಿಕಾರಿಪುರದಲ್ಲಿ ಇಂದು (ಮಂಗಳವಾರ) ಮಾತನಾಡಿದ ಸಿಎಂ ಯಡಿಯೂರಪ್ಪ, ಉಪ ಚುನಾವಣೆಯ ದಿನಾಂಕ ನಿಶ್ಚಯವಾಗಿದ್ದು, ಅನರ್ಹರಿಗೆ ಟಿಕೆಟ್ ನೀಡುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಯಾವುದೇ ಉಹಾಪೂಹಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಪಕ್ಷದ 10 ರಿಂದ 12  ಟಿಕೆಟ್ ಆಕಾಂಕ್ಷಿಗಳಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡಿ ಹೊಸಬರ ಗೆಲುವಿಗೆ ಶ್ರಮಿಸುವಂತೆ ಸೂಚಿಸಲಾಗುವುದು. ಎಲ್ಲಾ 15 ಜನ ಅನರ್ಹ ಶಾಸಕರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಬೈ ಎಲೆಕ್ಷನ್: ಮಸ್ಕಿ, RR ನಗರ ಕ್ಷೇತ್ರಗಳಿಗೆ ಚುನಾವಣೆಯಾಕಿಲ್ಲ? ಕಾರಣ ಇಲ್ಲಿದೆ

ಈಗಾಗಲೇ  ಹೊಸಕೋಟೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಮಗೆಯೇ ಟಿಕಟ್ ನೀಡಬೇಕೆಂದು ಆಕಾಂಕ್ಞಿಗಳು ಆಗ್ರಹಿಸುತ್ತಿದ್ದಾರೆ. ಆದ್ರೆ, ಇದೀಗ ಯಡಿಯೂರಪ್ಪ ಅವರು ಅನರ್ಹ ಶಾಸಕರ ಗೆಲುವಿಗೆ ಶ್ರಮವಹಿಸಿ ಎಂದು ಹೇಳುವ ಮೂಲಕ ಟಿಕೆಟ್ ಆಕಾಂಕ್ಷಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಉಪಚುನಾವಣೆ ನಡೆಯುವ ಕ್ಷೇತ್ರಗಳು
1) ಚಿಕ್ಕಬಳ್ಳಾಪುರ 2) ಮಹಾಲಕ್ಷ್ಮಿ ಲೇಔಟ್ 3) ಹೊಸಕೋಟೆ, 4) ಹುಣಸೂರು 5) ಗೋಕಾಕ್, 6) ಯಶವಂತಪುರ, 7) ಅಥಣಿ 8) ಕಾಗವಾಡ 9)ಶಿವಾಜಿನಗರ, 10) ಕೆ.ಆರ್.ಪೇಟೆ 11) ಕೆ.ಆರ್.ಪುರಂ 12) ಹಿರೇಕೆರೂರು 13) ರಾಣೆಬೆನ್ನೂರು, 14) ವಿಜಯನಗರ 15) ಯಲ್ಲಾಪುರ.

ಉಪಚುನಾವಣೆಯ ಪ್ರಮುಖ ದಿನಾಂಕಗಳು
ನವೆಂಬರ್ 11 : ನಾಮಪತ್ರ ಸಲ್ಲಿಕೆ ಆರಂಭ 
ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
ನವೆಂಬರ್ 19 ನಾಮಪತ್ರಗಳ ಪರಿಶೀಲನೆ 
ನವೆಂಬರ್ 21 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
ಡಿಸೆಂಬರ್ 5 ಮತದಾನ (7 ಗಂಟೆಯಿಂದ 6)  ಡಿಸೆಂಬರ್ 9 ಮತ ಎಣಿಕೆ

click me!