
ನಂದುರ್ಬರ್(ಅ.19): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಖಂಡಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಾಕತ್ತಿದ್ದರೆ ಆರ್ಟಿಕಲ್ 370ಯನ್ನು ಮರು ಸ್ಥಾಪಿಸುವುದಾಗಿ ಘೋಷಿಸಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದ್ದಾರೆ.
ಮಹಾರಾಷ್ಟ್ರದ ನಂದುರ್ಬರ್'ನಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದೆ ಆರ್ಟಿಕಲ್ 370 ರದ್ದುಗೊಳಿಸುವುದಾಗಿ ಘೋಷಿಸುವ ತಾಕತ್ತು ರಾಹುಲ್ ಗಾಂಧಿ ಅವರಿಗೆ ಇದೆಯೇ ಎಂದು ಪ್ರಶ್ನಿಸಿದರು.
ವಿಶೇಷ ಸ್ಥಾನಮಾನದ ನೆರಳಲ್ಲಿ ಪಾಕಿಸ್ತಾನ ಕಾಶ್ಮೀರದಲ್ಲಿ ಉಗ್ರರನ್ನು ಹುಟ್ಟು ಹಾಕುತ್ತಿತ್ತು ಎಂದು ಆರೋಪಿಸಿರುವ ಶಾ, ರಾಜ್ಯದ ಅಭಿವೃದ್ಧಿಗೂ ಮಾರಕವಾಗಿದ್ದ ಆರ್ಟಿಕಲ್ 370ಯನ್ನು ಕಿತ್ತೆಸೆಯುವುದು ಮೋದಿ ಸರ್ಕಾರದ ಪ್ರಮುಖ ಆದ್ಯತೆಯಾಗಿತ್ತು ಎಂದು ಹೇಳಿದರು.
ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್‌ಗಾಗಿ ಇದುವರೆಗೂ 370ನೇ ವಿಧಿ ರದ್ದುಗೊಳಿಸಿರಲಿಲ್ಲ. ಅವರಿಗೆ ರಾಷ್ಟ್ರೀಯ ಹಿತಾಸಕ್ತಿಗಿಂತ ಮತ ಬ್ಯಾಂಕ್ ಮುಖ್ಯವಾಗಿತ್ತು ಎಂದು ಬಿಜೆಪಿ ರಾಷ್ರಾಧ್ಯಕ್ಷ ಕಿಡಿಕಾರಿದರು.
ರಾಹುಲ್ ಗಾಂಧಿ ಅವರು ಮಹಾರಾಷ್ಟ್ರಕ್ಕೂ 370ನೇ ವಿಧಿಗೂ ಏನು ಸಂಬಂಧ ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ ಅವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370ನೇ ವಿಧಿ ಮರು ಸ್ಥಾಪಿಸುವುದಾಗಿ ಘೋಷಿಸಲಿ ಎಂದು ಶಾ ಸವಾಲು ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.