ಕಾಶ್ಮೀರಿಗಳ ಗೆಲ್ಲಲು ಅಮಿತ್ ಶಾ ತಂತ್ರ

Published : Jun 28, 2019, 11:18 AM IST
ಕಾಶ್ಮೀರಿಗಳ ಗೆಲ್ಲಲು ಅಮಿತ್  ಶಾ ತಂತ್ರ

ಸಾರಾಂಶ

ಉಗ್ರ ದಾಳಿಯಲ್ಲಿ ಹುತಾತ್ಮರಾದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪಡೆಗೆ ಸೇರಿದ ಅರ್ಷದ್ ಅಹಮದ್ ಖಾನ್ ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 

ಶ್ರೀನಗರ [ಜೂ.28] : ಜೂನ್  12 ರಂದು ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪಡೆಗೆ ಸೇರಿದ ಅರ್ಷದ್ ಅಹಮದ್ ಖಾನ್ ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಭೇಟಿ ಮಾಡಿದರು. ಈ ವೇಳೆ ಅವರು ಅರ್ಷದ್ ಅವರ ಪೋಷಕರು, ಪತ್ನಿ ಮತ್ತು ಮಕ್ಕಳನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು. 

ಅಲ್ಲದೆ  ಕುಟುಂಬಕ್ಕೆ ಮುಂದಿನ ದಿನಗಳಲ್ಲಿ ಎಲ್ಲಾ ನೆರವಿನ ಭರವಸೆ ನೀಡಿದರು. ಜೊತೆಗೆ ಅರ್ಷದ ಪತ್ನಿಗೆ ಸರ್ಕಾರಿ ಹುದ್ದೆಯ ಆಫರ್ ನೀಡಿದರು. ಕಾಶ್ಮೀರದಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯೊಬ್ಬರ ಮನೆಗೆ ಕೇಂದ್ರ ಗೃಹ ಸಚಿವರು ಭೇಟಿ ನೀಡಿದ ಮೊದಲ ಪ್ರಕರಣ ಇದಾಗಿದೆ.

ಇದು ಕಾಶ್ಮೀರಗಳ ಮನಸ್ಸು ಗೆಲ್ಲಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರೂಪಿಸಿರುವ ಹೊಸ ರಣತಂತ್ರ ಎನ್ನಲಾಗಿದೆ. ಒಂದೆಡೆ ಉಗ್ರರನ್ನು ಮಟ್ಟಹಾಕುವ, ಅದೇ ಮತ್ತೊಂದೆಡೆ ದೇಶಪ್ರೇಮ ತೋರಿಸಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡುವ ಭದ್ರತಾ ಸಿಬ್ಬಂದಿಗಳನ್ನು ಗೌರವಿಸುವುದು ಸಹಜವಾಗಿಯೇ ಜನರಿಗೆ ಕೇಂದ್ರದ ಬಗ್ಗೆ ಉತ್ತಮ ಅಭಿಪ್ರಾಯ ರೂಪುಗೊಳ್ಳಲು ಕಾರಣವಾಗುತ್ತದೆ ಎಂಬುದು ಶಾ ಲೆಕ್ಕಾಚಾರ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?