ನಾಳೆ ಬೆಂಗಳೂರಿಗೆ ಅಮಿತ್ ಶಾ ಆಗಮನ

Published : Jan 08, 2018, 07:39 PM ISTUpdated : Apr 11, 2018, 12:45 PM IST
ನಾಳೆ ಬೆಂಗಳೂರಿಗೆ ಅಮಿತ್ ಶಾ ಆಗಮನ

ಸಾರಾಂಶ

ನಾಳೆ ಬೆಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಲಿದ್ದಾರೆ. ನಾಳೆ ಸಂಜೆ 4.45 ಕ್ಕೆ ಬೆಂಗಳೂರಿಗೆ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್  ಶಾ ಆಗಮಿಸಲಿದ್ದು, ಯಲಹಂಕದ ರಾಯಲ್ ಆರ್ಕಿಡ್ ರೆಸಾರ್ಟ್'ನಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.

ಬೆಂಗಳೂರು (ಜ.08):  ನಾಳೆ ಬೆಂಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಲಿದ್ದಾರೆ. ನಾಳೆ ಸಂಜೆ 4.45 ಕ್ಕೆ ಬೆಂಗಳೂರಿಗೆ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್  ಶಾ ಆಗಮಿಸಲಿದ್ದು, ಯಲಹಂಕದ ರಾಯಲ್ ಆರ್ಕಿಡ್ ರೆಸಾರ್ಟ್'ನಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ.

ಸಂಜೆ 5.30 ರಿಂದ ಬಿಜೆಪಿ ನಾಯಕರ  ಸಭೆಯಲ್ಲಿ ಭಾಗಿಯಾಗಲಿದ್ದು  ತಡರಾತ್ರಿ 10.30 ರವರೆಗೆ ಸಭೆ ನಡೆಸಲಿದ್ದಾರೆ.  ಸಭೆ ಬಳಿಕ ನಾಳೆ ರಾತ್ರಿ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜನವರಿ 10 ರಂದು ಚಿತ್ರದುರ್ಗಕ್ಕೆ ತೆರಳಲಿದ್ದಾರೆ. ಹೊಳಲ್ಕೆರೆಯ ಬಿಜೆಪಿ  ಪರಿವರ್ತನಾ  ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಮಾವೇಶದ ಬಳಿಕ ಹೊಳಲ್ಕೆರೆ ಅತಿಥಿಗೃಹದಲ್ಲಿ ಅರ್ಧ ಗಂಟೆ ಕಾಲ ವಿಶ್ರಾಂತಿ ಪಡೆದು ಮದ್ಯಾಹ್ನ 2.30 ಕ್ಕೆ ಹೊಳಲ್ಕೆರೆಯಿಂದ ಹೆಲಿಕಾಫ್ಟರ್ ಮೂಲಕ ಕೆಂಪೇಗೌಡ ಏರ್ ಪೋರ್ಟ್'ಗೆ ಪ್ರಯಾಣ ಬೆಳೆಸಲಿದ್ದಾರೆ.  ಸಂಜೆ 5.30  ಕ್ಕೆ  ಬೆಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇದೇ ಮೊದಲ ಬಾರಿಗೆ ಅತೀ ದುಬಾರಿಯಾದ ಬೆಳ್ಳಿ, ಚಿನ್ನಕ್ಕಿಂತ ವೇಗದಲ್ಲಿ ಸಾಗುತ್ತಿದೆ ಸಿಲ್ವರ್
ರಾಜ್ಯದ ತಾಪಮಾನ 12°Cಗೆ ಕುಸಿತ-ಕರುನಾಡಿಗೆ ಶೀತ ಕಂಟಕ ಖಚಿತ-ಬೆಂಗಳೂರು ಜನತೆಗೆ ಮೈನಡುಕ ಉಚಿತ!