
ನವದೆಹಲಿ (ಆ.12): ಮುಂಬರುವ ಚುನವಣಾ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ 3 ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ರಾಜಧಾನಿಗೆ ಆಗಮಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಅವರಿಗೆ ಹುರಿದುಂಬಿಸಿದ್ದಾರೆ.
ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾರನ್ನು ನೂರಾರು ಕಾರ್ಯಕರ್ತರು ಆತ್ಮೀಯವಾಗಿ ಬರ ಮಾಡಿಕೊಂಡರು. “ನಾನು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನನ್ನು ಭೇಟಿ ಮಾಡಲು ಬಯಸುತ್ತೇನೆ. ಬಿಎಸ್’ವೈ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ ಅಬ್ ಕಿ ಬಾರ್ ಬಾಜಪ ಸರ್ಕಾರ್, ಭಾರತ್ ಮಾತಾ ಕಿ ಜೈ ಎಂದು ಹೇಳುವ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಪಕ್ಷ ನಡೆದುಕೊಂಡ ರೀತಿಯ ಬಗ್ಗೆ ನಮಗೆ ಹೆಮ್ಮೆಯಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದೆ. ಕರ್ನಾಟಕದ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತಾರೆ ಎನ್ನುವ ನಂಬಿಕೆ ನಮಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ನಿರ್ಮಾಣ ಮಾಡುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.
ಬಿಎಸ್’ವೈ ಹಾಗೂ ಈಶ್ವರಪ್ಪ ನಡುವಿನ ಬ್ರಿಗೇಡ್ ಕಿತ್ತಾಟದ ಬಗ್ಗೆ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಮಾತನಾಡಿ, ಇವೆಲ್ಲಾ ಈಗ ಹಳೆಯ ವಿಚಾರ. ಈಗ ಪಕ್ಷದ ನಾಯಕತ್ವ ಒಗ್ಗೂಡಿದೆ. ಮಿಷನ್ 150 ಯೇ ನಮ್ಮೆಲ್ಲರ ಗುರಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.