ದೇಶದ ಮೂಲೆಮೂಲೆಯಲ್ಲೂ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸುವ ಕನಸಿನೊಂದಿಗೆ 2014 ರಲ್ಲಷ್ಟೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದ ಅಮಿತ್ ಶಾ ಇದೀಗ, ರಾಷ್ಟ್ರ ರಾಜಕೀಯದಲ್ಲಿ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಆ.8 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅವರು ಗುಜರಾತ್‌ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ.
ನವದೆಹಲಿ (ಜು.26): ದೇಶದ ಮೂಲೆಮೂಲೆಯಲ್ಲೂ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸುವ ಕನಸಿನೊಂದಿಗೆ 2014 ರಲ್ಲಷ್ಟೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದ ಅಮಿತ್ ಶಾ ಇದೀಗ, ರಾಷ್ಟ್ರ ರಾಜಕೀಯದಲ್ಲಿ ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಆ.8 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅವರು ಗುಜರಾತ್‌ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ.
ಗುಜರಾತ್‌ನ ಮೂರು ರಾಜ್ಯಸಭಾ ಸ್ಥಾನಗಳಿಗೆ ಆ.೮ರಂದು ಚುನಾವಣೆ ನಡೆಯಲಿದ್ದು, ಈ ಪೈಕಿ ಎರಡು ಸ್ಥಾನಗಳಿಗೆ ಬಿಜೆಪಿ ಸ್ಪರ್ಧಿಸಲಿದೆ. ಒಂದು ಸ್ಥಾನದಿಂದ ಹಾಲಿ ಕೇಂದ್ರ ಸಚಿವೆ ಸ್ಮತಿ ಇರಾನಿ ಸ್ಪರ್ಧಿಸಲಿದ್ದರೆ, ಇನ್ನೊಂದು ಸ್ಥಾನದಿಂದ ಅಮಿತ್ ಶಾ ಕಣಕ್ಕೆ ಇಳಿಯಲಿದ್ದಾರೆ. ಈ ಮೊದಲು, ಈ ಎರಡು ಸ್ಥಾನಗಳಿಂದ ಕ್ರಮವಾಗಿ ಬಿಜೆಪಿಯವರೇ ಆದ ಸ್ಮತಿ ಇರಾನಿ ಮತ್ತು ದಿಲೀಪ್ ಭಾಯ್ ಪಾಂಡ್ಯಾ ಆಯ್ಕೆಯಾಗಿದ್ದರು. ಈ ಪೈಕಿ ಪಾಂಡ್ಯಾ ಸ್ಥಾನದಿಂದ ಈ ಬಾರಿ ಶಾ ಕಣಕ್ಕೆ ಇಳಿಯಲಿದ್ದಾರೆ. ಮೂರನೇ ಸ್ಥಾನದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಅವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಪ್ರಸ್ತುತ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಾಗಿರುವ ಶಾ, ಸಂಸತ್ತು ಪ್ರವೇಶಿಸಲಿರುವ ಬೆಳವಣಿಗೆ ವ್ಯಾಪಕ ಅಚ್ಚರಿಗೆ ಕಾರಣವಾಗಿದೆ. ಅಮಿತ್ ಶಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದರೂ, ಅವರಿಗೆ ಸಂಸತ್ ರಾಜಕಾರಣದಲ್ಲಿ ಯಾವುದೇ ಸ್ಥಾನಮಾನ ಇರಲಿಲ್ಲ. ಹೀಗಾಗಿ ಅವರನ್ನು ರಾಜ್ಯಸಭೆಗೆ ಕಳುಹಿಸುವ ನಿರ್ಧಾರಕ್ಕೆ ಪಕ್ಷದ ನಾಯಕರು ಬಂದಿದ್ದಾರೆ ಎನ್ನಲಾಗಿದೆ. 1997 ರಲ್ಲಿ ಮೊದಲ ಬಾರಿಗೆ ಗುಜರಾತ್ ರಾಜ್ಯ ವಿಧಾನಸಭೆ ಪ್ರವೇಶಿಸಿದ್ದ ಅಮಿತ್ ಶಾ ನಂತರ 1998, 2002, 2007 ಮತ್ತು 2017 ರಲ್ಲಿ ಆಯ್ಕೆಯಾಗಿದ್ದರು. ಮೋದಿ ಗುಜರಾತ್ ಸಿಎಂ ಆಗಿದ್ದ ಅವಧಿಯಲ್ಲಿ ಶಾ, ರಾಜ್ಯದಲ್ಲಿ ಪ್ರಭಾವಿ ಖಾತೆಗಳನ್ನು ಹೊಂದಿದ್ದರು.
2014 ರಲ್ಲಿ ಅಮಿತ್ ಶಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಬಿಜೆಪಿ, ಮಹಾರಾಷ್ಟ್ರ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಅಸ್ಸಾಂ, ಉತ್ತರಪ್ರದೇಶ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಅಧಿಕಾರಕ್ಕೆ ಏರಿದೆ. ಬಿಹಾರ ಮತ್ತು ದೆಹಲಿ ಮಾತ್ರವೇ ಶಾಗೆ ಕನಸಾಗಿ ಉಳಿದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.