ಇಂದು ರಾಜ್ಯ ಬಿಜೆಪಿ ನಾಯಕರಿಗೆ ಹೆಡ್ ಮಾಸ್ಟರ್ ಅಮಿತ್ ಶಾ ಪಾಠ

Published : Dec 31, 2017, 07:30 AM ISTUpdated : Apr 11, 2018, 01:13 PM IST
ಇಂದು ರಾಜ್ಯ ಬಿಜೆಪಿ ನಾಯಕರಿಗೆ ಹೆಡ್ ಮಾಸ್ಟರ್ ಅಮಿತ್ ಶಾ ಪಾಠ

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆಯ ರಣತಂತ್ರ ರೂಪಿಸುವ ಸಂಬಂಧ ಮತ್ತು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಸನ್ನದ್ಧಗೊಳಿಸುವ ಉದ್ದೇಶದಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾನುವಾರ ನಗರದಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಬೆಂಗಳೂರು (ಡಿ.31): ಮುಂಬರುವ ವಿಧಾನಸಭಾ ಚುನಾವಣೆಯ ರಣತಂತ್ರ ರೂಪಿಸುವ ಸಂಬಂಧ ಮತ್ತು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಸನ್ನದ್ಧಗೊಳಿಸುವ ಉದ್ದೇಶದಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾನುವಾರ ನಗರದಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಶಾ ಅವರು ಯಲಹಂಕ ಬಳಿಯ ರೆಸಾರ್ಟ್‌ವೊಂದರಲ್ಲಿ ಸಂಜೆವರೆಗೂ ಸರಣಿ ಸಭೆಗಳನ್ನು ನಡೆಸುವ ಮೂಲಕ ಪಕ್ಷದ ಚುನಾವಣಾ ದಿಕ್ಸೂಚಿ ಅಂತಿಮಗೊಳಿಸಲಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ್ದ ಅವರು ಪಕ್ಷದ ಎಲ್ಲ ವಿಭಾಗಗಳಿಗೂ ನಿರ್ದಿಷ್ಟ ಗುರಿ ನೀಡಿದ್ದರು. ಇದೀಗ ಅವುಗಳ ಕತೆ ಏನಾಯಿತು ಎಂಬುದರ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಜೊತೆಗೆ ಮುಂದೇನು ಮಾಡಬೇಕು ಎಂಬುದರ ಹೊಸ ಕೆಲಸವನ್ನೂ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಅಮಿತ್ ಶಾ ಅವರ ಆಪ್ತರಾಗಿರುವ ರಾಷ್ಟ್ರೀಯ ಮುಖಂಡರಾಗಿರುವ ಅರುಣ್ ಸಿಂಗ್, ಭೂಪೇಂದ್ರ ಯಾದವ್ ಅವರು ನಗರಕ್ಕೆ ಆಗಮಿಸಿ ಸಮಗ್ರ ರಾಜಕೀಯ ಬೆಳವಣಿಗೆಗಳ ಮಾಹಿತಿ ಸಂಗ್ರಹಿಸಿದ್ದಾರೆ.

ಜತೆಗೆ ಕೇಂದ್ರದ ಸಚಿವರೂ ಆಗಿರುವ ಪಕ್ಷದ ಚುನಾ ವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ಕೂಡ ಶನಿವಾರವೇ ಆಗಮಿಸಿ ಪೂರ್ವ ಸಿದ್ಧತೆಗಳ ಅವಲೋಕನ ನಡೆಸಿದರು. ಇವರೆಲ್ಲರ ವರದಿ ಮುಂದಿ ಟ್ಟುಕೊಂಡು ಅಮಿತ್ ಶಾ ಪರಿಶೀಲನೆ ನಡೆಸಲಿದ್ದಾರೆ.

ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ತುಸು ಬೇಸರವನ್ನೇ ಹೊಂದಿರುವ ಅಮಿತ್ ಶಾ ಅವರು ಎಲ್ಲ ಮುಖಂಡರಿಗೆ ಕ್ಲಾಸ್ ತೆಗೆದುಕೊಳ್ಳುವುದು ನಿಶ್ಚಿತವಾ ಗಿದೆ. ಜತೆಗೆ ಪರಿವರ್ತನಾ ಯಾತ್ರೆ ಆರಂಭವಾಗುವ ಮೊದಲ ದಿನ ಸಮಾವೇಶ ವಿಫಲಗೊಂಡಿರುವುದರ ಜೊತೆಗೆ ಅಲ್ಲಲ್ಲಿ ಕೆಲವೆಡೆ ಯಾತ್ರೆ ವೇಳೆ ನಡೆದಿರುವ ಅಹಿತಕರ ಘಟನೆಗಳ ಬಗ್ಗೆಯೂ ಮುಖಂಡರನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!