
ಚೆನ್ನೈ (ಡಿ.06): ತಮಿಳು ನಾಡು ಮಾಜಿ ಮುಖ್ಯಮಂತ್ರಿ ಸೆಲ್ವಿ ಜಯಲಲಿತಾ ಅಂತ್ಯ ಸಂಸ್ಕಾರಕ್ಕೆ ಮರೀನಾ ಬೀಚ್ ನಲ್ಲಿ ಸಕಲ ಸಿದ್ಧತೆ ನಡೆದಿದೆ.
ಇನ್ನು ಕೆಲವೇ ನಿಮಿಷಗಳಲ್ಲಿ ಮಣ್ಣಾಗಿ ಹೋಗಲಿದ್ದಾರೆ. ಕೊನೆಯ ಬಾರಿ ಅವರ ಮುಖವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದಾರೆ. ಅವರನ್ನು ನಿಯಂತ್ರಿಸಲು ಪೋಲಿಸರು ಹರಸಾಹಸ ಪಡುತ್ತಿದ್ದಾರೆ.
ತಮಿಳು ನಾಡಿನ ಅಧಿನಾಯಕಿ ಮಣ್ಣಲ್ಲಿ ಮಣ್ಣಾಗಿ ಹೋಗಲಿದ್ದಾರೆ. ಅಗಲಿದ ಅಮ್ಮನನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ ರಾಜ್ಯದ ಜನ. ತಮ್ಮ ರಾಜಕೀಯ ಗುರು ಎಂಜಿಆರ್ ಸಮಾಧಿ ಪಕ್ಕದಲ್ಲೇ ಇವರು ಶಾಶ್ವತವಾಗಿ ಉಳಿಯಲಿದ್ದಾರೆ.
ತಮ್ಮ ಜಾತಿ ಅಯ್ಯಂಗಾರಿ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ನಡೆಯದೇ ಹೂಳುವ ಮೂಲಕ ದೇಹವನ್ನು ಮಣ್ಣು ಮಾಡಲಾಗುತ್ತಿದೆ. ದತ್ತು ಪುತ್ರ ಸುಧಾಕರನ್ ಅಂತ್ಯ ಸಂಸ್ಕಾರದ ವಿಧಿ ವಿಧಾನವನ್ನು ಪೂರೈಸುವ ನಿರೀಕ್ಷೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.