ಬೆಂಗಳೂರಿನ ಅಮ್ನೆಸ್ಟಿ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

By Web DeskFirst Published Oct 25, 2018, 10:25 PM IST
Highlights

ಎಫ್ ಸಿಆರ್ ಎ ಅನುದಾನಗಳಿಗೆ ಸಂಬಂಧಿಸಿದಂತೆ ಫೆಮಾ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ.  

ಬೆಂಗಳೂರು(ಅ.25): ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪದ ವಿಚಾರವಾಗಿ ಮಾನವ ಹಕ್ಕುಗಳ ಸಂಘಟನೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ವಿರುದ್ಧ ಜಾರಿ ನಿರ್ದೇಶನಾಲಯ  ಬೆಂಗಳೂರು ಸೇರಿದಂತೆ ಎರಡು ಸ್ಥಳಗಳಲ್ಲಿ ಫೆಮಾ ಅಡಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಎಫ್ ಸಿಆರ್ ಎ ಅನುದಾನಗಳಿಗೆ ಸಂಬಂಧಿಸಿದಂತೆ ಫೆಮಾ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ.  

ಪರಿಸರಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆ ಗ್ರೀನ್ ಪೀಸ್ ಹಾಗೂ ಸಂಬಂಧಿಸಿದ ಇತರ ಸಂಸ್ಥೆಗಳ 12ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಇಡಿ ಕೆಲ ಸಮಯದ ಹಿಂದೆ ಸ್ಥಗಿತಗೊಳಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ.

click me!