ಅನಂತ್‌ಕುಮಾರ್ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

Published : Nov 12, 2018, 09:29 PM ISTUpdated : Nov 12, 2018, 10:16 PM IST
ಅನಂತ್‌ಕುಮಾರ್ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

ಸಾರಾಂಶ

ಕೇಂದ್ರ ಸಚಿವ ಅನಂತ್ ಕುಮಾರ್ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸಿಎಂ ಕುಮಾರಸ್ವಾಮಿ ಮತ್ತು ರಾಜ್ಯಪಾಲ ವಜೂಭಾಯಿ ವಾಲಾ ಬರಮಾಡಿಕೊಂಡರು.

ಬೆಂಗಳೂರು[ನ.12]  ಅನಂತಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿ 8.45 ಗಂಟೆ ಸುಮಾರಿಗೆ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದರು.

ಅನಂತ್ ಕುಮಾರ್ ನಿವಾಸದಲ್ಲಿಯೇ ಅಂತಿಮ ನಮನ ಸಲ್ಲಿಸಿದ್ದಾರೆ. ವಿಮಾನದ ಮೂಲಕ ಇಂದೇ ದೆಹಲಿಗೆ ಪ್ರಧಾನಿ ಹಿಂದಿರುಗಲಿದ್ದಾರೆ. ಪ್ರಧಾನಿ ಆಗಮನದ ಕಾರಣಕ್ಕೆ ಬಸವನಗುಡಿ ಮತ್ತು ಜಯನಗರ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಅನಂತ ಅಸ್ತಂಗತ, ಜೀವನ ಸಾಧನೆ

ಅನಂತಕುಮಾರ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ತರಲಾಗುತ್ತಿದ್ದು, ಅಲ್ಲಿ ಬೆಳಗ್ಗೆ 8ರಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ ಬೆಳಗ್ಗೆ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನಕ್ಕೆ ಒಯ್ದು ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.  ನಾಳೆ ಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆಯ ಟಿ.ಆರ್‌. ಮಿಲ್‌ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

"

 

"

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!