
ಬೆಂಗಳೂರು[ಡಿ.18] 2019ರ ಲೋಕಸಭಾ ಚುನಾವಣೆಗೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿವೆ. ಇದೇ ವೇಳೆ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕ್ಷೇತ್ರವಾದ ಬೆಂಗಳೂರು ದಕ್ಷಿಣದಿಂದ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಿ ಕಣಕ್ಕೆ ಇಳಿಸುವ ಸಾಧ್ಯತೆ ಇದೆ.
ಆದರೆ ಈ ಬಗ್ಗೆ ತೇಜಸ್ವಿನಿ ಅನಂತ್ ಕುಮಾರ್ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇಂಜಿಯರಿಂಗ್ ಗ್ರಾಜುಯೇಟ್ ಆಗಿರುವ ತೇಜಸ್ವಿನಿ ಅವರು ಅದಮ್ಯ ಚೇತನ ಸಂಸ್ಥೆ ನಡೆಸುತ್ತಿದ್ದು, ಜವಾಬ್ದಾರಿಯನ್ನು ಹೊರುವ ಸಾಮರ್ಥ್ಯ ಅವರಲ್ಲಿ ಇರುವ ಕಾರಣ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆಸಿದ್ದು, ಈ ಮೂಲಕ ಅವರು ರಾಜಕೀಯ ರಂಗಕ್ಕೆ ತರುವ ಯತ್ನ ನಡೆಸಲಾಗುತ್ತಿದೆ.
ಸಹಪಾಠಿಯನ್ನೇ ಬಾಳ ಸಂಗಾತಿ ಮಾಡಿಕೊಂಡ ಅನಂತ್
ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಚಿರಪರಿಚಿತರೇ ಆಗಿರುವ ಅವರು, ಈ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಪಾಲ್ಗೊಂಡಿದ್ದಾರೆ. ಅವರೆ ತಮ್ಮದೇ ಆದ ಅದಮ್ಯ ಚೇತನದ ಮೂಲಕ ಮನೆಮಾತಾಗಿದ್ದಾರೆ. ಅಲ್ಲದೇ ಬಿಜೆಪಿಗೂ ಆ ಕ್ಷೇತ್ರದಲ್ಲಿ ಒಬ್ಬ ಉತ್ತಮ ಅಭ್ಯರ್ಥಿ ಬೇಕಾಗಿದೆ.
ಜಯನಗರ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಯ ವಿಜಯ್‌ಕುಮಾರ್ ಪ್ರತಿನಿಧಿಸುತ್ತಿದ್ದರು. ಆದರೆ ಅವರ ಅಕಾಲಿಕ ಮರಣದ ನಂತರ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿ ಬಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.