
ಬೊಮ್ಮನಹಳ್ಳಿ: ಕೇಂದ್ರ ಮಾಜಿ ಸಚಿವ, ದಿವಂಗತ ಅನಂತ ಕುಮಾರ್ ಅವರ ಸಾಧನೆಗಳು ಚಿರಸ್ಥಾಯಿಯಾಗಿದ್ದು, ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿದೆ ಎಂದು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ ಹೇಳಿದರು.
ಬೊಮ್ಮನಹಳ್ಳಿಯ ಹೊಂಗಸಂದ್ರ ವಾರ್ಡ್‌ನಲ್ಲಿ ದಿವಂಗತ ಅನಂತ ಕುಮಾರ್ ಪುತ್ಥಳಿ ಆನಾವರಣಗೊಳಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಆಗುವ ಕೆಲಸಗಳು ಎಷ್ಟೇ ಕಷ್ಟವಾಗಿದ್ದರೂ ತಮ್ಮ ನೈಪುಣ್ಯತೆ ಹಾಗೂ ಸ್ವಸಾಮರ್ಥ್ಯದಿಂದ ಮಾಡಿಸುತ್ತಿದ್ದರು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಚಿತ್ರನಟ ಅಂಬರೀಷ್ ಅವರಿಗೂ ನುಡಿನಮನ ಸಲ್ಲಿಸಲಾಯಿತು. ರಕ್ತದಾನ ಹಾಗೂ ಗಿಡಗಳ ವಿತರಿಸಲಾಯಿತು. ಪಾಲಿಕೆ ಸದಸ್ಯೆ ಭಾರತಿ ರಾಮಚಂದ್ರ, ಬಿಜೆಪಿ ಮುಖಂಡ ಮುನಿರಾಂ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ರಾಮಚಂದ್ರ, ಎಂ.ಚೇತನ್, ಸುನೀಲ್ ಇತರರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.