
ವಿಜಯವಾಡ(ಸೆ.10): ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರಕಾರ ನಿರಾಕರಿಸುವುದನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಿದೆ.
ವಿಶಾಖಪಟ್ಟಣ, ವಿಜಯವಾಡ, ಕಡಪ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಯುತ್ತಿದೆ. YSR ಕಾಂಗ್ರೆಸ್, ಸಿಪಿಐ, ಸಿಪಿಎಂ ಸೇರಿದಂತೆ ಹಲವು ಪಕ್ಷಗಳು ಬಂದ್‌ಗೆ ಕರೆ ನೀಡಿವೆ. ವಿಜಯವಾಡದ ಪಂಡಿತ್ ನೆಹರು ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿ ರಸ್ತೆ ತಡೆ ನಡೆಸಿದ್ರು. ಬಂದ್ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸ್ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಹಲವೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಸ್ ಸಂಚಾರ ಸಹ ಸಂಪೂರ್ಣ ಸ್ಥಗಿತಗೊಂಡಿದೆ.
ಚುನಾವಣೆ ಸಂದರ್ಭದಲ್ಲಿ ಬಿಜೆಪಿ- ಟಿಡಿಪಿ ಮೈತ್ರಿಕೂಟ ಆಂಧ್ರಕ್ಕೆ 5 ವರ್ಷಗಳ ಬದಲಿಗೆ 10 ವರ್ಷಗಳ ಕಾಲ ವಿಶೇಷ ಸ್ಥಾನಮಾನ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಈ ಭರವಸೆ ಈಡೇರಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.