ಮೋದಿ ಸರ್ಕಾರಕ್ಕೆ ಲೋಕಸಭಾ ಚುನಾವಣೆಗೂ ಮುನ್ನವೇ ಕಂಟಕ..?

By Web DeskFirst Published Jul 13, 2018, 1:27 PM IST
Highlights

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೀಗ ಚುನಾವಣೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಂಟಕ ಎದುರಾಗಿದೆ. 

ನವದೆಹಲಿ :  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೀಗ ಚುನಾವಣೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಕಂಟಕ ಎದುರಾಗಿದೆ. 

ಆಂಧ್ರ ಪ್ರದೇಶದಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಅನೇಕ ದಿನಗಳಿಂದ ಆಗ್ರಹಿಸುತ್ತಿರುವ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಇದೀಗ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲು ತೀರ್ಮಾನಿಸಿದ್ದಾರೆ. 

ಮುಂದಿನ ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡನೆ ಮಾಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಗುರುವಾರ ಸಭೆ ನಡೆಸಿದ ಚಂದ್ರಬಾಬು ನಾಯ್ಡು ಎಂಪಿಗಳಿಗೆ ಸೂಚನೆ ನೀಡಿದ್ದಾರೆ. 

ಇನ್ನು ಕಳೆದ ಜೂನ್ ತಿಂಗಳಲ್ಲಿ ಆಂಧ್ರ ಪ್ರದೇಶದದ ಟಿಡಿಪಿ ನೇತೃತ್ವದ ಸರ್ಕಾರ ಅಭಿವೃದ್ಧಿಗೆ ನೀಡಿದ್ದ ಅನೇಕ  ಭರವಸೆಗಳನ್ನು ಕೇಂದ್ರವೂ ಈಡೇರಿಸಿಲ್ಲ ಎಂದು ಸುಪ್ರಿಂ ಮೊರೆ ಹೋಗಿತ್ತು. 

ಇದೀಗ ಇದೇ ವಿಚಾರವಾಗಿ ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡನೆಗೆ ತೀರ್ಮಾನಿಸಿದೆ.

click me!