
ಅಮರಾವತಿ : ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಐವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲು ನಿರ್ಧಾರ ಮಾಡಿದ್ದಾರೆ.
SC, ST, BC, ಅಲ್ಪಸಂಖ್ಯಾತ, ಕಾಪು ಸಮುದಾಯಕ್ಕೆ ಒಂದೊಂದು ಉಪಮುಖ್ಯಮಂತ್ರಿ ಹುದ್ದೆ ನೀಡಲು ತೀರ್ಮಾನಿಸಿದ್ದಾರೆ. ಶುಕ್ರವಾರ ಸಚಿವ ಸಂಪುಟ ನಡೆಸಿದ ಸಿಎಂ ಜಗನ್ ಐವರು ಮುಖ್ಯಮಂತ್ರಿಗಳ ನೇಮಕದ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.
ದೇಶದಲ್ಲಿ ಯಾವುದೇ ರಾಜ್ಯದಲ್ಲಿಯೂ ಕೂಡ ಇರುವರೆಗೆ ಐವರು ಉಪ ಮುಖ್ಯಮಂತ್ರಿಗಳ ನೇಮಕ ಆಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಐವರು ಉಪ ಮುಖ್ಯಮಂತ್ರಿಗಳ ನೇಮಕ ಮಾಡಿ ಇತಿಹಾಸ ಸೃಷ್ಟಿಸಲು ಆಂಧ್ರ ಪ್ರದೇಶ ಸಂಪುಟ ನಿರ್ಧಾರ ಮಾಡಿದೆ.
ಮುಖ್ಯಮಂತ್ರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಪಾಲ್ಗೊಂಡಿದ್ದು , ನೂತನ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಜನರ ಹಿತ ಕಾಯುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಹೇಳಿದರು.
ಈ ಹಿಂದೆ ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ಸರ್ಕಾರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳ ನೇಮಕ ಮಾಡಲಾಗಿತ್ತು. ಕಾಪು ಹಾಗೂ BC ಸಮುದಾಯಕ್ಕೆ ಹುದ್ದೆ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.