
ಬೆಂಗಳೂರು(ಎ.11):ಐಸಿಡಿಎಸ್ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಅನುದಾನ ಕಡಿಮೆ ಮಾಡಿರು ವುದನ್ನು ವಿರೋಧಿಸಿ ಸದ್ಯದಲ್ಲೇ ರಾಜ್ಯ ದಲ್ಲಿರುವ ಕೇಂದ್ರ ಸಚಿವರು, ಸಂಸದರ ಮನೆ ಮುಂದೆ ಧರಣಿ ಆರಂಭಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಹೇಳಿದ್ದಾರೆ.
ಅಂಗನವಾಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯದ ವಿರುದ್ಧ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳಬೇಕಿದೆ. ಈ ಬಗ್ಗೆ ನಾವು ಸಲಹೆ ನೀಡಿದ್ದೇವೆ. ಇದರೊಂದಿಗೆ ಕೇಂದ್ರದ ವಿರುದ್ಧ ಹೋರಾಟ ರೂಪಿಸು ತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿದ್ದ ಸಭೆಯ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಹೊರೆಯಾಗುತ್ತಿದ್ದರೂ ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಿದೆ. ಆದರೆ ಕೇಂದ್ರ ಸರ್ಕಾರ ಈ ಹಿಂದೆ ನೀಡುತ್ತಿದ್ದ ಅನುದಾನವನ್ನೂ ಕಡಿಮೆ ಮಾಡಿದೆ. ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಕೇಂದ್ರವನ್ನು ಸಾಕಷ್ಟುಬಾರಿ ಒತ್ತಾಯಿಸಿದ್ದೇವೆ ಎಂದರು.
ಆದರೆ ಕೇಂದ್ರದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅಷ್ಟೇ ಏಕೆ, ಕೇಂದ್ರ ಸಚಿವರೂ ಅಂಗನವಾಡಿ ಹೋರಾಟಗಾ ರರನ್ನು ಅಲಕ್ಷ್ಯ ಮಾಡಿದ್ದಾರೆ. ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನ ಮಾಡುವ ಅಂಗನವಾಡಿ ಕಾರ್ಯಕರ್ತೆ ಯರನ್ನು ಕೇಂದ್ರದವರೇ ನಿರ್ಲಕ್ಷ್ಯ ಮಾಡುತ್ತಿರುವುದು ದೊಡ್ಡ ಅನ್ಯಾಯ. ಆದ್ದರಿಂದ ಈ ವಿಚಾರವಾಗಿ ದೇಶದ ರಾಜಧಾನಿ ದೆಹಲಿಯಲ್ಲೂ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ವರಲಕ್ಷ್ಮಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.