ಲೋಕಸಭೆಯಲ್ಲೂ ಪ್ರತಿಧ್ವನಿಸಿತು ಅಂಗನವಾಡಿ ಪ್ರತಿಭಟನೆ

By Suvarna Web DeskFirst Published Mar 23, 2017, 10:28 AM IST
Highlights

ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರ ಿಂದು ಲೋಕಸಭೆಯಲ್ಲಿ ಪ್ರತಿಧ್ವನಿಸಿತು. ಕೇಂದ್ರ ಸಚಿವ ಅನಂತ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಈ ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಹೇಳಿದ್ದಾರೆ.

ನವದೆಹಲಿ (ಮಾ.23): ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರ ಿಂದು ಲೋಕಸಭೆಯಲ್ಲಿ ಪ್ರತಿಧ್ವನಿಸಿತು. ಕೇಂದ್ರ ಸಚಿವ ಅನಂತ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಈ ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಹೇಳಿದ್ದಾರೆ.

ಲೋಕಸಭೆಯ ಶೂನ್ಯ ಅವಧಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ವಿಚಾರವನ್ನು ಪ್ರಸ್ತಾಪಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನವನ್ನು ಹೆಚ್ಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಸರ್ಕಾರ ಒಂದುವೇಳೆ ಈ ಬಿಕ್ಕಟ್ಟನ್ನು ಬಗೆಹರಿಸದೇ ಇದ್ದರೆ ದೊಡ್ಡ ಮಟ್ಟದಲ್ಲಿ ಜನಾಂದೋಲನವನ್ನು ಕೈಗೊಳ್ಳಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಹಂಚಿಕೆ ಮಾಡಿರುವ ಹೊರೆಯ ಭಾರವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಬೇಕೆಂದು ಖರ್ಗೆ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಏನು ಕೊಡಬೇಕಿತ್ತೋ ಅದನ್ನು ರಾಜ್ಯ ಸರ್ಕಾರ ಕೊಟ್ಟಿಲ್ಲವೆಂದು ಅನಂತ್ ಕುಮಾರ್ ದನಿ ಸೇರಿಸಿದರು.

click me!