
ರಾಮನಗರ (ಆ.03): ಶಾಸಕರು ಅನರ್ಹರಾಗಿರುವ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ನಗರದ ವಿಜಯನಗರ ಬಡಾವಣೆಯಲ್ಲಿರುವ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆಂಬುದು ವದಂತಿ. ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕೆಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ ಎಂದು ವದಂತಿಗಳಿಗ ತೆರೆ ಎಳೆದರು.
ನಿಖಿಲ್ ಸದ್ಯಕ್ಕೆ ಹೊಸ ಪ್ರೊಡಕ್ಷನ್ ಕೆಲಸ ಮಾಡಲು ಸಹಿ ಮಾಡಿದ್ದಾನೆ. ಈಗ ಬಿಡುಗಡೆ ಆಗಲಿರುವ ಕುರುಕ್ಷೇತ್ರ ಚಿತ್ರದಲ್ಲಿ ಚೆನ್ನಾಗಿ ನಟಿಸಿದ್ದಾನೆ. ಆ ಸಿನಿಮಾದಿಂದ ನಿಖಿಲ್ ಒಳ್ಳೆಯ ಹೆಸರು ಬರಲಿದೆ. ಸಿನಿಮಾದಲ್ಲಿ ತೊಡಗಿರುವ ಕಾರಣ ಉಪ ಉಪಚುನಾವಣೆಯಲ್ಲಿ ಸ್ಪರ್ಧಿಸುವ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬಿಜೆಪಿ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಆ ರೀತಿಯ ಸಣ್ಣ ತನದ ರಾಜಕೀಯ ಮಾಡುವುದಿಲ್ಲವೆಂಬ ವಿಶ್ವಾಸವಿದೆ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಾರಿಗೂ ತೊಂದರೆ ನೀಡಿಲ್ಲ. ರಾಮನಗರ ಕ್ಷೇತ್ರಕ್ಕೆ ಸಂಬಂಧಸಿದಂತೆ ಮುಂದಿನ ದಿನಗಳಲ್ಲಿ ನೀವೇ ಕಾದು ನೋಡಿ ಎಂದು ಹೇಳಿದರು.
ರಾಮನಗರದಲ್ಲಿ ಆದಷ್ಟು ಬೇಗ ರಾಜೀವ್ ಗಾಂಧೀ ಯೂನಿವರ್ಸಿಟಿ ಪ್ರಾರಂಭವಾಗಲಿದೆ. ಈ ಕುರಿತು ಅಧಿಕಾರಿಗಳ ಜನತೆ ಶೀಘ್ರವೇ ಚರ್ಚಿಸಿ ಮುಂದಿನ ಕ್ರಮವಹಿಸಲಾಗುವುದು. ಜಾಗದ ಸಮಸ್ಯೆ ಕುರಿತು ರೈತರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.