ನಿಲ್ಲಲಿದೆಯಾ ಅಂಜನಿಪುತ್ರ ಚಿತ್ರ ಪ್ರದರ್ಶನ..?

Published : Dec 26, 2017, 09:54 AM ISTUpdated : Apr 11, 2018, 12:53 PM IST
ನಿಲ್ಲಲಿದೆಯಾ ಅಂಜನಿಪುತ್ರ ಚಿತ್ರ ಪ್ರದರ್ಶನ..?

ಸಾರಾಂಶ

ಪುನೀತ್‌ ರಾಜ್‌ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆ ನೀಡಿದ್ದರೂ ವಿವಾದಿತ ಸಂಭಾಷಣೆಯುಳ್ಳ ದೃಶ್ಯಕ್ಕೆ ಕತ್ತರಿ ಹಾಕದೆ ಪ್ರದರ್ಶನ ಮುಂದುವರಿಸಿರುವುದರ ವಿರುದ್ಧ ಮಂಗಳವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ವಕೀಲ ನಾರಾಯಣಸ್ವಾಮಿ  ಹೇಳಿದ್ದಾರೆ.

ಬೆಂಗಳೂರು(ಡಿ.26): ಪುನೀತ್‌ ರಾಜ್‌ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆ ನೀಡಿದ್ದರೂ ವಿವಾದಿತ ಸಂಭಾಷಣೆಯುಳ್ಳ ದೃಶ್ಯಕ್ಕೆ ಕತ್ತರಿ ಹಾಕದೆ ಪ್ರದರ್ಶನ ಮುಂದುವರಿಸಿರುವುದರ ವಿರುದ್ಧ ಮಂಗಳವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ವಕೀಲ ನಾರಾಯಣಸ್ವಾಮಿ  ಹೇಳಿದ್ದಾರೆ.

ಚಿತ್ರ ತಂಡ ಮನೋರಂಜನೆ ಹೆಸರಿನಲ್ಲಿ ವಕೀಲರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ. ಅದೇ ಕಾರಣದಿಂದ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿ ಆದೇಶಿಸಿದೆ. ಆದರೆ, ಚಿತ್ರ ತಂಡ ನ್ಯಾಯಾಂಗ ಆದೇಶವನ್ನು ಉಲ್ಲಂಘಿಸಿ ಚಿತ್ರ ಪ್ರದರ್ಶನ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ. ಚಿತ್ರ ಪ್ರದರ್ಶನಕ್ಕೆ ತಡೆ ನೀಡಿರುವು ಆದೇಶದ ಪ್ರತಿಯನ್ನು ನಿರ್ಮಾಪಕ, ನಿರ್ದೇಶಕರಿಗೆ ಶನಿವಾರ ಸಂಜೆಯೇ ರವಾನಿಸಲಾಗಿದೆ.

ಇಷ್ಟಾದರೂ ಭಾನುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಚಿತ್ರ ಪ್ರದರ್ಶನ ಕಂಡಿದೆ. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿರುವ ಅವಮಾನವಾಗಿದೆ ಎಂದು ಅವರು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧವಲ್ಲ: ಬಿ.ಕೆ.ಹರಿಪ್ರಸಾದ್‌ ಲೇಖನ
ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಸರ್ಕಾರದ ನೆರವು ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್