
ಉಡುಪಿ: ಹಿಂದಿನ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ‘ಅನ್ನಭಾಗ್ಯ’ದಡಿ ಬಡವರಿಗೆ ನೀಡಲಾಗುತ್ತಿದ್ದ 7 ಕೇಜಿ ಅಕ್ಕಿಯ ಮೂಟೆ ತುಂಬಾ ಭಾರವಾಗಿತ್ತು. ಆದ್ದರಿಂದ ಇಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಗಳು 5 ಕೇಜಿಗೆ ಇಳಿಕೆ ಮಾಡಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅವರ ಈ ಹೇಳಿಕೆ ಈಗ ಚರ್ಚೆಗೆ ನಾಂದಿ ಹಾಡಿದೆ.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಕೊಡುವ ಅಕ್ಕಿ ಹೊರುವುದು ಭಾರ ಆಗುತ್ತದೆ ಎಂದು ಜನರು ದೂರುತ್ತಿದ್ದರು. ಆದ್ದರಿಂದ ಅದರ ಪ್ರಮಾಣವನ್ನು ಈ ಬಾರಿ ಬಜೆಟ್‌ನಲ್ಲಿ ಕಡಿಮೆ ಮಾಡಿದ್ದಾರೆ. ಇದೊಂದು ಪ್ರಯೋಗ ಎಂದು ಸಮಜಾಯಿಷಿ ನೀಡಿದರು.
ಕೇಂದ್ರವೇ ತೈಲ ಬೆಲೆ ಇಳಿಸಲಿ: ಇದೇ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಸಮರ್ಥಿಸಿಕೊಂಡ ಮಧ್ವರಾಜ್, ಪೆಟ್ರೋಲ್ ಬೆಲೆಯನ್ನು 454 ರು.ಗೆ ಇಳಿಸುತ್ತೇನೆ ಎಂದು ಭರವಸೆ ನೀಡಿದ್ದರು. ಆದಕಾರಣ ಕೇಂದ್ರವೇ ತೈಲ ಬೆಲೆ ಇಳಿಸಲಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.