ಇಂದು 3 ಲೈಂಗಿಕ ಕಿರುಕುಳ ಪ್ರಕರಣ ದಾಖಲು

Published : Jan 07, 2017, 03:10 PM ISTUpdated : Apr 11, 2018, 12:34 PM IST
ಇಂದು 3 ಲೈಂಗಿಕ ಕಿರುಕುಳ ಪ್ರಕರಣ ದಾಖಲು

ಸಾರಾಂಶ

. ಇಂದೂ ಕೂಡ ಮತ್ತೆ ಮೂರು ಪ್ರಕರಣಗಳು ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿವೆ.

ಹೊಸ ವರ್ಷಾಚರಣೆ ವೇಳೆ ಎಂಜಿ ರಸ್ತೆಯಲ್ಲಿ ಯುವತಿಯರ ಜತೆ ಅಸಭ್ಯ ವರ್ತನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಲೈಂಗಿಕ ಕಿರುಕುಳ ಪ್ರಕರಣಗಳು ಸರಣಿಯೋಪಾದಿಯಲ್ಲಿ ವರದಿಯಾಗುತ್ತಿವೆ. ಇಂದೂ ಕೂಡ ಮತ್ತೆ ಮೂರು ಪ್ರಕರಣಗಳು ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿವೆ.

ಕಬ್ಬನ್ ಪಾರ್ಕ್ : ಸೆಲ್ಫಿಗೆ ಒಪ್ಪದ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿ ಬೆನ್ನತ್ತಿದ ಕಾಮುಕರಿಬ್ಬರು ಬಲವಂತವಾಗಿ ಆಕೆಯ ಜತೆ ಸೆಲ್ಫಿ ತಗೆದುಕೊಳ್ಳಲು ಯತ್ನಿಸಿದ್ದಾರೆ. ಪೋಟೋಗೆ ಪೋಸ್​ ನೀಡಲು ಒಪ್ಪದ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂಬಂಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಾಣಸವಾಡಿ: ಬಾಣಸವಾಡಿಯ ಮೂರನೇ ಕ್ರಾಸ್​​​ನಲ್ಲಿ ಕ್ಯಾಬ್ ಗೆ ಕಾಯುತ್ತಿದ್ದ ಯುವತಿಯನ್ನು ಕಾಮುಕರು ಕಾಡಿದ್ದಾರೆ. ಆಕೆ ಬಳಿ ಬಂದು ಮೈ ಕೈ ಮುಟ್ಟಿ ಎಳೆದಾಡಿದ್ದಾರೆ. ಈ ಸಂಬಂಧ ನೊಂದ ಯುವತಿ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದರೂ ಪೊಲೀಸರು ಎನ್​ಸಿಆರ್​​ ಮಾಡಿಕೊಂಡು ಕೈತೊಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಾಣಸವಾಡಿಯಲ್ಲಿಯೇ ಮತ್ತೊಂದು ಪ್ರಕರಣ

ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಜನವರಿ 4ರ ರಾತ್ರಿ 9 ಗಂಟೆಗೆ ಯುವತಿಯೊಬ್ಬಳು ಜಿಮ್ ಮುಗಿಸಿ ಮನೆಗೆ ತೆರಳುವಾಗ ಹಿಂದಿನಿಂದ ಬಂದ ಇಬ್ಬರು ಯುವಕರು ಆಕೆಯ ಟೀ ಶರ್ಟ್  ಹಿಡಿದು ಎಳೆದಾಡಿದ್ದಾರೆ. ನಂತರ ಚೀರಾಡಿದ ಯುವತಿ ಕೀಡಿಗೇಡಿಗಳಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿದ್ದಾಳೆ.

ಒಟ್ಟಿನಲ್ಲಿ  ಎಲ್ಲಾ  ಪ್ರಕರಣಗಳನ್ನು ನೋಡಿದರೆ ಬೆಂಗಳೂರಿನಲ್ಲಿ ಕಾಮುಕರಿಗೆ ಖಾಕಿ ಭಯಾನೇ ಇಲ್ವಾ  ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡತೊಡಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!