
ನವದೆಹಲಿ(ಫೆ.16): ಕಾವೇರಿ ನದಿ ನೀರು ಹಂಚಿಕೆಯ ಪ್ರಕರಣದಲ್ಲಿ ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿವಿಲ್ ಮೇಲ್ಮನವಿಗಳ ಜೊತೆ ಜೊತೆಗೆ ತಮಿಳುನಾಡು ಸಲ್ಲಿಸಿರುವ ಇನ್ನೂ ಅನೇಕ ಅರ್ಜಿಗಳೂ ಶುಕ್ರವಾರವೇ ಇತ್ಯರ್ಥ ವಾಗುವ ಸಾಧ್ಯತೆಯೇ ಹೆಚ್ಚು. ಈ ರೀತಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಬಹುತೇಕ ಸಂದರ್ಭದಲ್ಲಿ ಕರ್ನಾಟಕ ತನಗೆ ನಿಗದಿತ ಪ್ರಮಾಣದಲ್ಲಿ ನೀರು ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳೇ ಹೆಚ್ಚು.
ಬಳಿಕ ಕರ್ನಾಟಕವು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪಾಲಿಸಿಲ್ಲ ಎಂಬ ನ್ಯಾಯಾಂಗ ನಿಂದನೆ ಅರ್ಜಿಗಳನ್ನೂ ಕೂಡ ದಾಖಲಿಸಿತ್ತು. ಹೀಗೆಯೇ ನ್ಯಾಯಾಧಿಕರಣದ ಐತೀರ್ಪಿನಲ್ಲಿ ಉಲ್ಲೇಖಿಸಿದ್ದ ಕಾವೇರಿ ನೀರು ನಿರ್ವಹಣಾ ಮಂಡಳಿ ಆಗಬೇಕೋ, ಬೇಡವೋ ಎನ್ನುವ ವಿಚಾರ ಕೂಡ ಶುಕ್ರವಾರದ ತೀರ್ಪಿನಲ್ಲೇ ಅಡಕವಾಗಿ ಬರುವ ನಿರೀಕ್ಷೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.