
ಇಸ್ಲಮಾಬಾದ್[ಆ.07]: 370ನೇ ವಿಧಿ ರದ್ದಾದ ಬಳಿಕ ಹತಾಶೆಗೊಳಗಾಗಿರುವ ಪಾಕಿಸ್ತಾನ, ಭಾರತದ ಇಂಥ ನಿರ್ಧಾರ, ಮತ್ತೊಂದು ಪುಲ್ವಾಮ ಮಾದರಿ ದಾಳಿಗೆ ಕಾರಣವಾಗಬಹುದು ಎಂದು ಬೆದರಿಕೆ ಹಾಕಿದ್ದಾರೆ.
ಕಾಶ್ಮೀರ ವಿಚಾರ ಸಂಬಂಧ ಆಯೋಜನೆಗೊಂಡಿದ್ದ ಸಂಸತ್ತಿನ ತುರ್ತು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಇಮ್ರಾನ್, ಭಾರತದ ಈ ನಡೆಯಿಂದಾಗಿ ಯುದ್ಧ ವಾತಾವರಣ ಸೃಷ್ಟಿಯಾಗಿದ್ದು, ಇದರಿಂದ ಪುಲ್ವಾಮ ಮಾದರಿ ದಾಳಿ ಸಂಭವಿಸಿದ್ರೂ ಅಚ್ಚರಿಯಿಲ್ಲ. ಇದಕ್ಕೆ ನಮ್ಮನ್ನು ದೂರಬಾರದು. ಎರಡು ಅಣ್ವಸ್ತ್ರ ರಾಷ್ಟ್ರಗಳ ನಡುವಿನ ತಿಕ್ಕಾಟದಿಂದ ಕೇವಲ ಭಾರತ- ಪಾಕ್ ಮಾತ್ರವಲ್ಲ, ಇಡೀ ಜಗತ್ತು ಇದರಿಂದ ತೊಂದರೆ ಅನುಭವಿಸುತ್ತದೆ. ಇದು ನಮ್ಮ ಅಣ್ವಸ್ತ್ರ ಬೆದರಿಕೆಯಲ್ಲ. ನಮ್ಮ ಮೇಲೆ ದಾಳಿ ಮಾಡಿದರೆ ನಾವು ಪ್ರತಿದಾಳಿ ಮಾಡುತ್ತೇವೆ. ಇದರಿಂದ ಯುದ್ಧ ಸನ್ನಿವೇಶ ಸೃಷ್ಟಿಯಾಗುತ್ತದೆ. ಯುದ್ಧದಲ್ಲಿ ಯಾರೂ ಗೆಲ್ಲುವುದಿಲ್ಲ. ಯುದ್ಧ ನಡೆದರೆ ಇಡೀ ಪ್ರಪಂಚಕ್ಕೆ ತೊಂದರೆಯಾಗುತ್ತದೆ ಎಂದು ಪರೋಕ್ಷವಾಗಿ ಯುದ್ಧದ ಮುನ್ಸೂಚನೆ ನೀಡಿದ್ದಾರೆ.
ಜನಾಂಗೀಯ ಸಿದ್ಧಾಂತದ ಮೂಲಕ ಕಾಶ್ಮೀರವನ್ನು ಭಾರತ ಒಡೆದು ಹಾಕಿದ್ದು ಇದು ಮಹಾತ್ಮಾ ಗಾಂಧಿಯವರ ತತ್ವಗಳಿಗೆ ವಿರುದ್ಧವಾಗಿದೆ. ಭಾರತದ ಈ ನಿಲುವನ್ನು ನಾವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಶ್ನೆ ಮಾಡುತ್ತೇವೆ. ಜಾಗತಿಕ ಸಮುದಾಯ ಕಾಶ್ಮೀರದ ಪ್ರಸಕ್ತ ಸನ್ನಿವೇಶದ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ನಾವು ನಮ್ಮ ಎಲ್ಲಾ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಕಾಯ್ದುಕೊಳ್ಳುವುದಕ್ಕೆ ಬಯಸಿದ್ದು, ಭಾರತ ಇದಕ್ಕೆ ಪೂರಕವಾಗಿ ಸ್ಪಂದಿಸುತ್ತಿಲ್ಲ. ನಾನು ಭಾರತದ ಪ್ರಧಾನಿಯೊಂದಿಗೆ ನಾನು ಮಾತುಕತೆ ನಡೆಸಿದಾಗ ಕಾಶ್ಮೀರದಲ್ಲಿ ಉಪಟಳ ನೀಡುತ್ತಿರುವ ಭಯೋತ್ಪಾದಕರನ್ನು ನಿಯಂತ್ರಿಸುವ ಬಗ್ಗೆ ಮಾತು ಕೊಟ್ಟಿದ್ದೆ. ಆದರೆ ಅವರು ನಮ್ಮ ಮೇಲೆ ದಾಳಿ ಮಾಡಿದರು. ಮಾತುಕತೆ ಕರೆದರೂ ಪೂರಕವಾಗಿ ಸ್ಪಂದಿಸುತ್ತಿಲ್ಲ ಎಂದು ಸದನದಲ್ಲಿ ಅಳಲು ತೋಡಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.