
ಹೊಸ್ಟನ್(ಸೆ.27): ಅಮೆರಿಕದ ಸೌಥ್‌ವೆಸ್ಟ್‌ಹೂಸ್ಟನ್‌ನ ಸ್ಟ್ರಿಪ್‌ಮಾಲ್‌ನಲ್ಲಿ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾನೆ. ಮಾಲ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, 9 ಜನರು ಗಾಯಗೊಂಡಿದ್ದಾರೆ.
ಇದರಲ್ಲಿ ಮೂವರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದ್ದು, ಓರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿ ಎಕೆ-47 ಮತ್ತು ಎಆರ್-15 ಗನ್‌ಗಳಿಂದ ದಾಳಿ ನಡೆಸಿದ್ದಾನೆ.
ಪೊಲೀಸರು ಮತ್ತು ದುಷ್ಕರ್ಮಿ ನಡುವೆ ಗುಂಡಿನ ಚಕಮಕಿ ನಡೆದಿದೆ. ದುಷ್ಕರ್ಮಿ ಸುಮಾರು 100 ಸುತ್ತು ಗುಂಡು ಹಾರಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಆರೋಪಿಯನ್ನು ಸದೆಬಡೆಯುವಲ್ಲಿ ಹೂಸ್ಟನ್‌ಪೊಲೀಸರು ಯಶಸ್ವಿಯಾಗಿದ್ದಾರೆ. ಇಂತಹ ಘಟನೆಗಳು ಅಮೆರಿಕದಲ್ಲಿ ಪದೇ ಪದೆ ನಡೆಯುತ್ತಿರುವುದು ಅಲ್ಲಿನ ಜನರನ್ನು ಆತಂಕಕ್ಕೀಡು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.