
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ‘ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ’ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಯ್ಕೆ ಪ್ರಕಿಯೆ ಪ್ರಾರಂಭಿಸಿರುವ ಪಕ್ಷದ ಸಂಸ್ಥಾಪಕಿ ಅನುಪಮಾ ಶೆಣೈ, ಕಳಂಕರಹಿತ ಹಾಗೂ ಸಾಮಾಜಿಕ ಮೌಲ್ಯಗಳುಳ್ಳವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಂಕ ರಹಿತರು, ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಲಾಗುವುದು, ಅಲ್ಲದೆ, ಪಕ್ಷದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು.
ಆಸಕ್ತರು ತಮ್ಮ ಸೇವೆಗೆ ಸಂಬಂಧಿಸಿದಂತಹ ವಿವರಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.