ಆಂಧ್ರ ಪ್ರದೇಶ: ನಗದು-ರಹಿತ ವ್ಯವಹಾರಕ್ಕಾಗಿ ಉಚಿತ ಮೊಬೈಲ್ ಫೋನ್?

Published : Nov 26, 2016, 09:32 AM ISTUpdated : Apr 11, 2018, 01:00 PM IST
ಆಂಧ್ರ ಪ್ರದೇಶ: ನಗದು-ರಹಿತ ವ್ಯವಹಾರಕ್ಕಾಗಿ ಉಚಿತ ಮೊಬೈಲ್ ಫೋನ್?

ಸಾರಾಂಶ

ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮವು ಮುಂದಿನ ದಿನಗಳಲ್ಲಿ ಪ್ರಯೋಜನಕಾರಿಯಾಗಿದೆ ಎಂದು ಹೇಳಿರುವ ನಾಯ್ಡು, ಮೊಬೈಲ್ ಕರೆನ್ಸಿ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಹಾಗೂ ರೂಪಾಯ್ ಕಾರ್ಡ್’ಗಳನ್ನು ಪರಿಣಾಮಕಾರಿಯಾಗಿ ಬಳಸುವಂತೆ ಕರೆಯಿತ್ತಿದ್ದಾರೆ.

ಹೈದರಾಬಾದ್ (ನ.26): ನೋಟು ಅಮಾನ್ಯ ಕ್ರಮದ ಬಳಿಕ ಜನರು ಎದುರಿಸುತ್ತಿರುವ ಸಮಸ್ಯೆಯನ್ನು ನಿಭಾಯಿಸಲು ಹಾಗೂ ನಗದು-ರಹಿತ ವಹಿವಾಟನ್ನು ಪ್ರೋತ್ಸಾಹಿಸಲು ಆಂಧ್ರ ಪ್ರದೇಶ ಸರ್ಕಾರ, ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಮೊಬೈಲ್ ಫೋನ್’ಗಳನ್ನು ಹಂಚುವ ಬಗ್ಗೆ ಚಿಂತನೆ ನಡೆಸಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮವು ಮುಂದಿನ ದಿನಗಳಲ್ಲಿ ಪ್ರಯೋಜನಕಾರಿಯಾಗಿದೆ ಎಂದು ಹೇಳಿರುವ ನಾಯ್ಡು, ಮೊಬೈಲ್ ಕರೆನ್ಸಿ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಹಾಗೂ ರೂಪಾಯ್ ಕಾರ್ಡ್’ಗಳನ್ನು ಪರಿಣಾಮಕಾರಿಯಾಗಿ ಬಳಸುವಂತೆ ಕರೆಯಿತ್ತಿದ್ದಾರೆ.

ಆಂಧ್ರ ಪ್ರದೇಶ ಸರ್ಕಾರವು ‘ಏಪಿ ಪರ್ಸ್’ ಎಂಬ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.  ಆಂಧ್ರ ಪ್ರದೇಶವನ್ನು ದೇಶದ ಮೊದಲ ನಗದು-ರಹಿತ ವ್ಯವಹಾರ ನಡೆಸುವ ರಾಜ್ಯವನ್ನಾಗಿ ಮಾಡಲು ಸಹಕಾರಿಯಾಗಲಿದೆ ಎಂದು ಆಂಧ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!