
ಶಿವಮೊಗ್ಗ(ನ.01): ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ (Stenographer) 8 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್'ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ನ್ಯಾಯಾಲಯದ ಅಂತರ್ಜಾಲ ತಾಣ www.ecourts.gov.in /shivamogga /onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ನ.20ರೊಳಗಾಗಿ ಸಲ್ಲಿಸುವುದು ಹಾಗೂ ಶುಲ್ಕವನ್ನು ಚಲನ್ ಮುಖಾಂತರ ನ.21ರೊಳಗೆ ಎಸ್'ಬಿಐ ಬ್ಯಾಂಕಿನಲ್ಲಿ ಪಾವತಿಸುವುದು. ಅರ್ಜಿಯಲ್ಲಿ ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ನಮೂದಿಸುವುದು, ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು.ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್'ಲೋಡ್ ಮಾಡುವುದು. ಅರ್ಜಿ, ಶುಲ್ಕ ತುಂಬಿದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ಕಾಯ್ದಿರಿಸಿ ಅರ್ಹತಾ ಪರೀಕ್ಷೆ ಸಮಯದಲ್ಲಿ ಹಾಜರುಪಡಿಸಬೇಕು.
ಹೆಚ್ಚಿನ ಮಾಹಿತಿಯನ್ನು ನ್ಯಾಯಾಲಯದ ಮಾಹಿತಿ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ನ್ಯಾ. ಆರ್.ಬಿ.ಧರ್ಮಗೌಡ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.