‘ಸರ್ವರಿಗೂ ಸೂರು’: ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಇದೆಯೇ? ಅರ್ಜಿ ಸಲ್ಲಿಸಲು ಮನವಿ

Published : Feb 01, 2018, 06:41 PM ISTUpdated : Apr 11, 2018, 01:00 PM IST
‘ಸರ್ವರಿಗೂ ಸೂರು’: ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಇದೆಯೇ? ಅರ್ಜಿ ಸಲ್ಲಿಸಲು ಮನವಿ

ಸಾರಾಂಶ

‘ಸರ್ವರಿಗೂ ಸೂರು ಅಭಿಯಾನ 2022’ಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸುವ ಸಲುವಾಗಿ ಸೂರು ಬೇಡಿಕೆ ಪ್ರಮಾಣದ ಸಮೀಕ್ಷೆ ನಡೆಸಲಿರುವ ಬಿಬಿಎಂಪಿ ಖಾಲಿ ನಿವೇಶನ ಹೊಂದಿರುವ ಬಿಪಿಎಲ್ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ವಾರ್ಡ್ ಕಚೇರಿಗಳಲ್ಲಿ ನಮೂನೆ-4ಬಿ ಅರ್ಜಿ ಪಡೆದು ಸಲ್ಲಿಸಬಹುದು

ಬೆಂಗಳೂರು: ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಇಲಾಖೆಯು ದೇಶದ ಪ್ರತಿ ನಾಗರಿಕರಿಗೂ ಸೂರು ಒದಗಿಸುವ ಉದ್ದೇಶದಿಂದ ರೂಪಿಸಿರುವ ‘ಸರ್ವರಿಗೂ ಸೂರು ಅಭಿಯಾನ 2022’ಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸುವ ಸಲುವಾಗಿ ಸೂರು ಬೇಡಿಕೆ ಪ್ರಮಾಣದ ಸಮೀಕ್ಷೆ ನಡೆಸಲು ಬಿಬಿಎಂಪಿ ಮುಂದಾಗಿದೆ.

ಫೆ.1ರಿಂದ 15ರವರೆಗೆ ಈ ಸಮೀಕ್ಷೆ ನಡೆಯಲಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿರುವ ಬಿಪಿಎಲ್ ಪಡಿತರ ಚೀಟಿದಾರರು ಅಥವಾ ಕನಿಷ್ಠ 21 ಚ.ಮೀಟರ್ ಕಾರ್ಪೆಟ್ ವಿಸ್ತೀರ್ಣದ ಮನೆಯುಳ್ಳ ಬಿಪಿಎಲ್/ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು ತಮ್ಮ ವ್ಯಾಪ್ತಿಯ ವಾರ್ಡ್ ಕಚೇರಿಗಳಲ್ಲಿ ನಮೂನೆ-4ಬಿ ಅರ್ಜಿ ಪಡೆದು ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಅರ್ಜಿ ಜತೆಗೆ ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿ, ಕುಟುಂಬದ ಆದಾಯ ಪ್ರಮಾಣ ಪತ್ರ, ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದು. ಪಾಲಿಕೆಯ ವೆಬ್‌ಸೈಟ್ www.bbmp.gov.in ನಲ್ಲೂ ನಮೂನೆ-4ಬಿ ಲಭ್ಯವಿದೆ. ಬಿಬಿಎಂಪಿ ಆಯುಕ್ತರು ಯೋಜನೆಯ ಪ್ರಧಾನ ಸಮೀಕ್ಷಾಧಿಕಾರಿಯಾಗಿದ್ದು, ಸಮೀಕ್ಷಾ ವರದಿ ತಯಾರಿಗೆ ಇತರೆ 8 ಅಧಿಕಾರಿಗಳ ತಂಡ ರಚಿಸಲಾಗಿದೆ. ಜನರು ಯೋಜನೆ ಉಪಯೋಗ ಪಡೆದು ಕೊಳ್ಳಬೇಕೆಂದು ಮೇಯರ್ ಸಂಪತ್‌ರಾಜ್ ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!