
ನವದೆಹಲಿ: ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಪ್ರಮಾಣದಲ್ಲಿ ಯೋಧರೇ ಜನಸಾಮಾನ್ಯರನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಆರೋಪಿಸಿದ್ದಾರೆ. ಅವರ ಈ ಆರೋಪವನ್ನು ಕಾಂಗ್ರೆಸ್ ಸಮರ್ಥಿಸಿಕೊಂಡಿದ್ದರೆ, ಬಿಜೆಪಿ ಈ ಹೇಳಿಕೆ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಆಜಾದ್, ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಉಂಟಾಗುವ ಸಾವಿಗಿಂತ ಹೆಚ್ಚಾಗಿ ಸೇನಾ ಕಾರ್ಯಾಚರಣೆಯಿಂದಲೇ ಜನರು ಸಾವನ್ನಪ್ಪುತ್ತಿದ್ದಾರೆ. ಯೋಧರ ದಾಳಿ ಉಗ್ರರಿಗಿಂತ ಹೆಚ್ಚಾಗಿ ಜನಸಾಮಾನ್ಯರನ್ನೇ ಗುರಿಯಾಗಿಸಿದೆ. ಉದಾಹರಣೆಗೆ ಪುಲ್ವಾಮಾದಲ್ಲಿ ಯೋಧರ ದಾಳಿಗೆ ಬಲಿಯಾಗಿದ್ದು ಓರ್ವ ಉಗ್ರ, ಆದರೆ ಅದೇ ವೇಳೆ 13 ಅಮಾಯಕ ನಾಗರಿಕರು ಸಾವನ್ನಪ್ಪಿದ್ದರು ಎಂದು ಹೇಳಿದ್ದಾರೆ.
ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಭಾರತವನ್ನು ಛಿದ್ರ ಮಾಡುವ ಶಕ್ತಿಗಳಿಗೆ ಬೆಂಬಲ ನೀಡುವ ಹೊಸ ಶಕ್ತಿಯಾಗಿ ರಾಹುಲ್ ಗಾಂಧಿ ಅಧ್ಯಕ್ಷತೆಯ ಕಾಂಗ್ರೆಸ್ ಉದಯಿಸಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಈ ನಡುವೆ ಆಜಾದ್ ಹೇಳಿಕೆಯನ್ನು ಕಾಂಗ್ರೆಸ್ ಸಮರ್ಥಿಸಿದೆ. ರಾಜ್ಯದಲ್ಲಿ ನಾಗರಿಕರ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ಆಜಾದ್ ಕಳವಳ ವ್ಯಕ್ತಪಡಿಸಿದ್ದರಲ್ಲಿ ತಪ್ಪೇನು ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.