ಆರ್ಟಿಕಲ್ 370 ರದ್ದು: ರಾಮನಗರದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ

Published : Aug 05, 2019, 05:01 PM IST
ಆರ್ಟಿಕಲ್ 370 ರದ್ದು: ರಾಮನಗರದಲ್ಲಿ ಕುಮಾರಸ್ವಾಮಿ  ಪ್ರತಿಕ್ರಿಯೆ

ಸಾರಾಂಶ

ಬಿ.ಎಸ್ ಯಡಿಯೂರಪ್ಪ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಆರ್ಟಿಕಲ್ 370 ನೇ ವಿಧಿ ರದ್ದು ಬಗ್ಗೆಯೂ ಮಾತನಾಡಿದ್ದಾರೆ.

ರಾಮನಗರ(ಆ.  05)  ಕಾಶ್ಮೀರಕ್ಕೆ ಒಳ್ಳೆಯದಾಗುವುದಿದ್ದರೆ ಈ ಮಸೂದೆಗೆ ಯಾವುದೇ ತೊಂದರೆಯಿಲ್ಲ. ಈ ಮಸೂದೆಯಿಂದ ಕಾಶ್ಮೀರದಲ್ಲಿ ಶಾಂತಿ ನೆಲೆಸಲಿ  ಎಂದು ಆರ್ಟಿಕಲ್ 370 ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮಾಜಿ ಸಿಎಂ ಕುಮಾರಸ್ವಾಮಿ ವಿಶ್ಲೇಷಣೆ ಮಾಡಿದ್ದಾರೆ.

ಚನ್ನಪಟ್ಟಣದ ಚಕ್ಕೆರೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಯಡಿಯೂರಪ್ಪನವರು ಆರೋಪ ಮಾಡಿದ್ದರು. ನಮ್ಮ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಆರೋಪ ಮಾಡಿದ್ದರು.  ಆದರೆ ಈಗ ಅವರ ಸರ್ಕಾರದಲ್ಲಿ ಏನು ನಡೆಯುತ್ತಿದೆ ಅನ್ನೋದನ್ನ ಅವರೇ ಹೇಳಬೇಕು ಎಂದು ಸವಾಲೆಸೆದರು.

ಆರ್ಟಿಕಲ್ 370 ರದ್ದು: ಮೋದಿ-ಶಾ ಜೋಡಿಗೆ ಅಡ್ವಾಣಿ ಅಭಿನಂದನೆ

ಬಿಜೆಪಿ ಸರಕಾರದಲ್ಲಿಏನು ನಡೆಯುತ್ತಿದೆ ಎಂದು ಯಡಿಯೂರಪ್ಪ ಅವರನ್ನೇ  ನೀವು ಕೇಳಬೇಕು ಎಂದು ಮಾಧ್ಯಮದವರಿಗೂ ನಯವಾಗಿ ಕುಟುಕಿದರು.

ದೋಸ್ತಿ ಸರ್ಕಾರ ವಿಶ್ವಾಸ ಮತ ಕಳೆದುಕೊಳ್ಳುವ ದಿನಕ್ಕೂ ಮುನ್ನ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ವರ್ಗಾವಣೆ ಜೋರಾಗಿ ನಡೆದಿತ್ತು.  ದೋಸ್ತಿ ಪತನದ ನಂತರ ಅಧಿಕಾರಕ್ಕೇರಿದ ಬಿಎಸ್ ಯಡಿಯೂರಪ್ಪ ಹಲವು ವರ್ಗಾವಣೆ ರದ್ದು ಮಾಡಿ ಆದೇಶ ಹೊರಡಿಸಿದ್ದರು. ಇದೇ ಕಾರಣಕ್ಕೆ ಕುಮಾರಸ್ವಾಮಿ ವರ್ಗಾವಣೆ ವಿಚಾರದಲ್ಲಿ ಮತ್ತೆ ಆರೋಪ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಏರಿಕೆಯಾಗ್ತಿರೋ ಚಿನ್ನವನ್ನು ಲಾಭದಾಯಕವಾಗಿ ಹೇಗೆ ಖರೀದಿಸಬೇಕು? ತಜ್ಞರ ಸಲಹೆ