
ಹಾಸನ(ಫೆ.07): ವಿಶ್ವಕ್ಕೆ ಶಾಂತಿಯ ಸಂದೇಶ ಸಾರುತ್ತಿರುವ ಭಗವಾನ್ ಬಾಹುಬಲಿಯ ವಿರಾಟ್'ಮೂರ್ತಿಯ 88ನೇ ಮಹಾಮಜ್ಜನಕ್ಕೆ ಶ್ರವಣಬೆಳಗೊಳ ಸಜ್ಜಾಗಿದೆ.
12 ವರ್ಷಗಳಿಗೊಮ್ಮೆ ನಡೆಯುವ ಈ ಮಹಾಮಸ್ತಕಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದಿನಿಂದ ಚಾಲನೆ ನೀಡಲಿದ್ದಾರೆ. ಈ ಮೂಲಕ ಮಸ್ತಕಾಭಿಷೇಕದ ಸಂಭ್ರಮಕ್ಕೆ ಅಧಿಕೃತವಾಗಿ ಚಾಲನೆ ಸಿಕ್ಕಂತಾಗಲಿದೆ.
ಚಾವುಂಡರಾಯ ವೇದಿಕೆಯಲ್ಲಿ ಬೆಳಗ್ಗೆ 10.45ಕ್ಕೆ ರಾಷ್ಟ್ರಪತಿಗಳು ಮಹಾಮಸ್ತಕಾಭಿಷೇಕೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಎ.ಮಂಜು, ಮಹಾಮಸ್ತಕಾಭಿಷೇಕ ಸಮಿತಿ-2018ರ ರಾಜ್ಯಮಟ್ಟದ ಸಮಿತಿ ಸಹ ಅಧ್ಯಕ್ಷ ಕೆ.ಅಭಯ್ ಚಂದ್ರ ಜೈನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಆ ಬಳಿಕ ಗೊಮ್ಮಟ ಮೂರ್ತಿಗೆ ಪೂಜೆ, ಹೋಮ, ಹವನ ಹಾಗೂ ಭಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಅಧಿಕೃತವಾಗಿ ಆರಂಭಗೊಳ್ಳಲಿವೆ. ಮೊದಲ ಮಸ್ತಕಾಭಿಷೇಕ ಫೆ.17ರಂದು ನಡೆಯಲಿದೆ. 40 ಲಕ್ಷ ಮಂದಿ ಆಗಮಿಸುವ ನಿರೀಕ್ಷೆ: ಮಸ್ತಕಾಭಿಷೇಕಕ್ಕೆ 40 ಲಕ್ಷ ಮಂದಿ ಆಗಮಿಸುವ ನಿರೀಕ್ಷೆಯಿದ್ದು ಕುಡಿವ ನೀರು,ಶೌಚಾಲಯ, ಊಟ, ಉಪಹಾರ, ವಸತಿ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.