ರಾಜ್ಯಸಭಾ ಚುನಾವಣೆ: ಸಚಿವ ಜೇಟ್ಲಿ ಉತ್ತರ ಪ್ರದೇಶದಿಂದ ಸ್ಪರ್ಧೆ

Published : Mar 08, 2018, 07:30 AM ISTUpdated : Apr 11, 2018, 12:45 PM IST
ರಾಜ್ಯಸಭಾ ಚುನಾವಣೆ: ಸಚಿವ ಜೇಟ್ಲಿ ಉತ್ತರ ಪ್ರದೇಶದಿಂದ ಸ್ಪರ್ಧೆ

ಸಾರಾಂಶ

ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸಲಿದ್ದಾರೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸಲಿದ್ದಾರೆ.

ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌  ಮಧ್ಯ ಪ್ರದೇಶದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಬುಧವಾರ ಪ್ರಕಟಿಸಿದೆ. ಪ್ರಸ್ತುತ ಜೇಟ್ಲಿ ಗುಜರಾತ್‌ನಿಂದ ಮತ್ತು ಪ್ರಧಾನ್‌ ಬಿಹಾರದಿಂದ ರಾಜ್ಯಸಭಾ ಸದಸ್ಯರುಗಳಾಗಿದ್ದಾರೆ.

ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಏಳು ಕೇಂದ್ರ ಸಚಿವರು ಮತ್ತು ಓರ್ವ ಪ್ರಧಾನ ಕಾರ್ಯದರ್ಶಿ ಸ್ಪರ್ಧಿಸುವ ಬಗ್ಗೆ ಪ್ರಕಟಿಸಲಾಗಿದೆ.

ಕೇಂದ್ರ ಸಚಿವರುಗಳಾದ ತಾವರ್‌ಚಂದ್‌ ಗೆಹ್ಲೋಟ್‌, ರವಿಶಂಕರ್‌ ಪ್ರಸಾದ್‌, ಜೆ.ಪಿ. ನಡ್ಡಾ, ಪುರುಷೋತ್ತಮ ರುಪಾಲ, ಮುನ್‌ಸುಖ್‌ ಮಾಂಡವೀಯ ತಮ್ಮ ತವರು ರಾಜ್ಯಗಳಿಂದಲೇ ಸ್ಪರ್ಧಿಸಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ಬಿಹಾರದಿಂದ ಸ್ಪರ್ಧಿಸಲಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!