ನಂಗೆ ಯಾವುದೇ ಜವಾಬ್ದಾರಿ ಬೇಡ: ಮೋದಿಗೆ ಮನವಿ ಮಾಡಿದ ಜೇಟ್ಲಿ!

Published : May 29, 2019, 02:15 PM IST
ನಂಗೆ ಯಾವುದೇ ಜವಾಬ್ದಾರಿ ಬೇಡ: ಮೋದಿಗೆ ಮನವಿ ಮಾಡಿದ ಜೇಟ್ಲಿ!

ಸಾರಾಂಶ

ಜವಾಬ್ದಾರಿ ಕೊಡಬೇಡಿ ಎಂದು ಮೋದಿ ಅವರಲ್ಲಿ ಮನವಿ ಮಾಡಿದ ಜೇಟ್ಲಿ| ಅನಾರೋಗ್ಯದಿಂದಾಗಿ ಯಾವುದೇ ಜವಾಬ್ದಾರಿ ಬೇಡ ಎಂದ ಅರುಣ್ ಜೇಟ್ಲಿ| ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ ಜೇಟ್ಲಿ| ವಿಶ್ರಾಂತಿಯ ಅಗತ್ಯವಿದೆ ಎಂದು ಜೇಟ್ಲಿ ಮನವರಿಕೆ|

ನವದೆಹಲಿ(ಮೇ.29): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟಕ್ಕೆ ಸೇರಲು ಹಲವರು ತುದಿಗಾಲಲ್ಲಿ ನಿಂತಿದ್ದಾರೆ. ಮೋದಿ-2 ಸರ್ಕಾರದಲ್ಲಿ ತಮ್ಮ ನಸೀಬು ಪ್ರದರ್ಶಿಸಲು ಎಲ್ಲರೂ ಸಜ್ಜಾಗಿದ್ದಾರೆ.

ಆದರೆ ಮೋದಿ-1 ಸರ್ಕಾರದಲ್ಲಿ ವಿತ್ತ ಸಚಿವರಾಗಿ ದೇಶ-ವಿದೇಶಗಳ ಗಮನ ಸೆಳೆದಿದ್ದ ಅರುಣ್ ಜೇಟ್ಲಿ, ತಮಗೆ ಈ ಬಾರಿ ಯಾವುದೇ ಜವಾಬ್ದಾರಿ ಕೊಡದಂತೆ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಖುದ್ದು ಮೋದಿ ಅವರಿಗೆ ಪತ್ರ ಬರೆದಿರುವ ಜೇಟ್ಲಿ, ಅನಾರೋಗ್ಯದ ಕಾರಣ ತಮಗೆ ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ನೀಡದಂತೆ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ಕಳೆದ 18 ತಿಂಗಳಿಂದ ತಾವು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಸಮಯದಲ್ಲಿ ತಮಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಜೇಟ್ಲಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು