
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಆಡಳಿತ ಮಂಡಳಿಯ ಹೆಚ್ಚುವರಿ ಸ್ವತಂತ್ರ ನಿರ್ದೇಶಕಿಯಾಗಿ, ಎಸ್‌ಬಿಐನ ಮಾಜಿ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ ಅವರನ್ನು ನೇಮಿಸಲಾಗಿದೆ. 2018ರ ಅ.17ರಿಂದ ಮುಂದಿನ 5 ವರ್ಷಗಳ ಅವಧಿಗೆ ಅವರು ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.
ಎಸ್‌ಬಿಐನಲ್ಲಿ 40 ವರ್ಷ ಸೇವೆ ಸಲ್ಲಿಸಿದ್ದ ಅರುಂಧತಿ 2017ರ ಅಕ್ಟೋಬರ್‌ನಲ್ಲಷ್ಟೇ ನಿವೃತ್ತಿಯಾಗಿದ್ದರು. ಅರುಂಧತಿ ಅವರು ಎಸ್‌ಬಿಐ ಅಧ್ಯಕ್ಷರಾಗಿದ್ದ ಅವಧಿಯಲ್ಲಿ, ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್, ಕಾಮರ್ಸ್ ಮತ್ತು ಹಣಕಾಸು ಸೇವೆ ಒದಗಿಸುವ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಎಸ್‌ಬಿಐ ಮತ್ತು ರಿಲಯನ್ಸ್ ಜಿಯೋ ಒಪ್ಪಂದಕ್ಕೆ ಸಹಿ ಹಾಕಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.