
ಬೆಂಗಳೂರು(ಡಿ.17): ಅತ್ಯಾಚಾರಕ್ಕೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್`ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್`ನಿಂದ ಜಾಮೀನು ಮಂಜೂರಾಗಿದೆ. ನ್ಯಾಯಾಧೀಶೆ ಬಿ.ಎಸ್.ರೇಖಾ ಜನವರಿ 12, 2017ರವರೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದಾರೆ.
ಮಹಿಳೆಗೆ ತರಬೇತಿ ನೀಡುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನ ಮಾಡಿದ ಆರೋಪ ಆರ್ಯವರ್ಧನ್ ವಿರುದ್ಧ ಕೇಳಿಬಂದಿತ್ತು. ಹೈದರಾಬಾದ್ ಮೂಲದ ನೊಂದ ಮಹಿಳೆ ಡಿಸೆಂಬರ್ 10ರಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.