ಯೋಗಿ ಆದಿತ್ಯನಾಥ್ ಒತ್ತಾಯದ ಮೇರೆಗೆ ಏರ್ ಶೋ ಸ್ಥಳಾಂತರ

By Web DeskFirst Published Aug 12, 2018, 12:44 PM IST
Highlights

2 ದಶಕಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪ್ರಸಿದ್ಧ  ಏರೋ ಇಂಡಿಯಾ ಶೋ ಇದೀಗ ಲಕ್ನೋಗೆ ಸ್ಥಳಾಂತರವಾಗಿದ್ದು  ಅದರ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಒತ್ತಡ ಇದೆ ಎನ್ನಲಾಗಿದೆ. 

ಅಲಿಗಢ:  ಎರಡು ದಶಕಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್‌ ಶೋ ಅನ್ನು ಉತ್ತರಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶನಿವಾರ ಬೆಳಗ್ಗೆಯಷ್ಟೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಆಗ್ರಹಿಸಿದ್ದರು. ಅಲಿಗಢದಲ್ಲಿ ನಡೆದ ರಕ್ಷಣಾ ಇಲಾಖೆಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ಉತ್ತರಪ್ರದೇಶದಲ್ಲಿ ಏರೋ ಇಂಡಿಯಾ ಶೋ ಆಯೋಜಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. 

ಆದಷ್ಟುಬೇಗ ನಗರದ ಹೆಸರನ್ನು ಅಂತಿಮಗೊಳಿಸಿದರೆ, ಈ ಕುರಿತು ಸಿದ್ಧತೆ ನಡೆಸಲು ಅನುಕೂಲವಾಗಲಿದೆ ಎಂದು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದರು. ಬಳಿಕ ಇದೇ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್‌ ಮಾತನಾಡಿದರಾದರೂ, ಅವರು ಏರೋ ಇಂಡಿಯಾ ಶೋ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ.

Latest Videos

ದಶಕಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ, ಈ ಬಾರಿ ಬೆಂಗಳೂರು ಕೈತಪ್ಪಿ, ಉತ್ತರಪ್ರದೇಶದ ಪಾಲಾಗಲಿದೆ ಎಂಬ ವರದಿಗಳ ಬೆನ್ನಲ್ಲೇ, ಆದಷ್ಟುಬೇಗ ನಗರದ ಹೆಸರನ್ನು ಅಂತಿಮಗೊಳಿಸುವಂತೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಒತ್ತಾಯಿಸಿದ್ದಾರೆ. ಈ ಮೂಲಕ ಲಕ್ಷಾಂತರ ಜನರನ್ನು ಆಕರ್ಷಿಸುವ ಪ್ರದರ್ಶನ ತಮ್ಮ ರಾಜ್ಯದ ಪಾಲಾದರೂ ಆಗಬಹುದು ಎಂಬ ಸುಳಿವು ನೀಡಿದ್ದಾರೆ.

ಇಲ್ಲಿ ಆಯೋಜಿತವಾಗಿದ್ದ ರಕ್ಷಣಾ ಇಲಾಖೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯೋಗಿ, ರಾಜ್ಯದಲ್ಲಿ ಏರೋ ಇಂಡಿಯಾ ಶೋ ಆಯೋಜಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ಆದಷ್ಟುಬೇಗ ನಗರದ ಹೆಸರನ್ನು ಅಂತಿಮಗೊಳಿಸಿದರೆ, ಈ ಕುರಿತು ಸಿದ್ಧತೆ ನಡೆಸಲು ಅನುಕೂಲವಾಗಲಿದೆ ಎಂದು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದರು.

ಬಳಿಕ ಇದೇ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿದರಾದರೂ, ಅವರು ಏರೋ ಇಂಡಿಯಾ ಶೋ ಬಗ್ಗೆ ಯಾವುದೇ ಪ್ರಸ್ತಾಪ ಮಾಡಲಿಲ್ಲ.

1996ರಲ್ಲಿ ಕಾರ್ಯಕ್ರಮ ಆರಂಭದಿಂದಲೂ ಬೆಂಗಳೂರಿನಲ್ಲೇ ಏರೋ ಇಂಡಿಯಾ ಶೋ ನಡೆಯುತ್ತಿದೆ. ಹಿಂದಿನ ವರ್ಷ ಇದನ್ನು ಗೋವಾಕ್ಕೆ ಸ್ಥಳಾಂತರಿಸಲು ಅಂದಿನ ರಕ್ಷಣಾ ಸಚಿವ ಮನೋಹರ್‌ ಪರ್ರಿಕರ್‌ ಚಿಂತನೆ ನಡೆಸಿದ್ದರೂ ಅದು ಫಲ ಕೊಟ್ಟಿರಲಿಲ್ಲ. ಇದೀಗ ಶೋ ಅನ್ನು ಉತ್ತರಪ್ರದೇಶಕ್ಕೆ ವರ್ಗಾಯಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ಹೇಳಿದ್ದವು. ಈ ಸುದ್ದಿಗೆ ಈಗಾಗಲೇ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

click me!