
ನವದೆಹಲಿ, (ಅ.29): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಧಿಕೃತವಾಗಿ ಕೋರ್ಟ್ ಆದೇಶ ತರಲಿ ಎಂದು ಅಸಾದುದ್ದೀನ್ ಓವೈಸಿ ಸವಾಲ್ ಹಾಕಿದ್ದಾರೆ.
ಇಂದು [ಸೋಮವಾರ] ಮಾಧ್ಯಮಗಳ ಜೊತೆ ಮಾತನಾಡಿದ ಹೈದರಬಾದ್ ಸಂಸದ, ಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಬಿಜೆಪಿಗೆ ತಾಖತ್ತಿದ್ದರೆ ಕೋರ್ಟ್ನಿಂದ ಮಂದಿರ ನಿರ್ಮಾಣಕ್ಕೆ ಆದೇಶ ತರಲಿ ಎಂದು ಸವಾಲ್ ಹಾಕಿದ್ದಾರೆ.
ಲೋಕಸಭಾ ಚುನಾವಣೆ: ಬಿಜೆಪಿ ಗೆಲ್ಲಲು ರಾಮಮಂದಿರ ನಿರ್ಮಾಣ ಅನಿವಾರ್ಯನಾ?
2019ರ ಜನವರಿಯ ವರೆಗೆ ಅಯೋಧ್ಯ ರಾಮ ಜನ್ಮಭೂಮಿ ಪ್ರಕರಣವನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಈ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು.
ಬಿಜೆಪಿ ನಾಯಕರ ಆದೇಶದಂತೆ ದೇಶ ನಡೆಯುವುದಿಲ್ಲ. ಭಾರತ ಇಲ್ಲಿನ ಸಂವಿಧಾನದ ಆಧಾರದ ಮೇಲೆ ನಡೆಯುತ್ತದೆ ಎಂದು ಓವೈಸಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ